Delhi Airport Roof Collapse: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ಛಾವಣಿ ಕುಸಿತ; ಓರ್ವ ಸಾವು, ಹಲವರಿಗೆ ಗಾಯ

Share the Article

Delhi Airport Roof Collapse: ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ, ದೇಶದ ಅತಿದೊಡ್ಡ ವಿಮಾನ ನಿಲ್ದಾಣವಾದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Belthangady: ಶಾಸಕ ಹರೀಶ್‌ ಪೂಂಜ ಸೇರಿ 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

ಅನೇಕ ಕಾರುಗಳು ಮತ್ತು ಟ್ಯಾಕ್ಸಿಗಳು ಸಹ ಅಪಘಾತದಲ್ಲಿ ಜಖಂ ಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಛಾವಣಿಯ ಶೀಟ್‌ನ ಹೊರತಾಗಿ ಸಪೋರ್ಟ್ ಬೀಮ್ ಕೂಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟರ್ಮಿನಲ್‌ನ ಪಿಕ್‌ಅಪ್‌ ಮತ್ತು ಡ್ರಾಪ್‌ನಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಹಾನಿಯಾಗಿದೆ.

ಕಬ್ಬಿಣ ಸರಳುಗಳು ಬಿದ್ದ ಕಾರಿನಿಂದ ಆರು ಮಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇಂದು ಬೆಳಗ್ಗಿನ ಜಾವ 5:30 ರ ಸುಮಾರಿಗೆ DFS ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಮೂರು ಅಗ್ನಿಶಾಮಕ ಟೆಂಡರ್‌ಗಳನ್ನು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ಈ ಅಪಘಾತದ ನಂತರ, ಟರ್ಮಿನಲ್ 1 ರಿಂದ ಹೊರಡುವ ಮತ್ತು ಟರ್ಮಿನಲ್ 1 ಗೆ ಆಗಮಿಸುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರೀ ಮಳೆಯೇ ಮೇಲ್ಛಾವಣಿ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ದೆಹಲಿಯಲ್ಲಿ ಭಾರೀ ಪ್ರವಾಹ ಮತ್ತು ರಸ್ತೆಗಳು ಮತ್ತು ಇತರ ಪ್ರದೇಶಗಳಲ್ಲಿ ನೀರು ನಿಂತಿದೆ.

Leave A Reply

Your email address will not be published.