Siddaramaiah-Narendra Modi: ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ -ಡಿಸಿಎಂ, ಇಟ್ಟು ಬೇಡಿಕೆಗಳೇನು?

Siddaramaiah-Narendra Modi: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್(DK Shivkumar) ಅವರು ಮಂತ್ರಿವರ್ಯರ ಸಮೇತ ನಿನ್ನೆ (ಜೂ 29) ದೆಹಲಿ(Delhi) ಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

 

NEET UG 2024 ಮರುಪರೀಕ್ಷೆ ಫಲಿತಾಂಶ ಇಂದು, ರಿಸಲ್ಟ್ ನೋಡಲು ಇಲ್ಲಿದೆ ಲಿಂಕ್ – 24 ಲಕ್ಷ ವಿದ್ಯಾರ್ಥಿಗಳ ರಾಂಕಿಂಗ್ ನಲ್ಲಿ ಬದಲಾವಣೆ ಖಚಿತ !

ಹೌದು, ಪ್ರಧಾನಿ ನರೇಂದ್ರ ಮೋದಿಯವರನ್ನ (Narendra Modi) ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯದ ಅಭಿವೃದ್ಧಿ ಮತ್ತು ಬಾಕಿ ಅನುದಾನಗಳ ಬಿಡುಗಡೆ ವಿಚಾರವಾಗಿ ಮಾತುಕತೆ ನಡೆಸಿದ್ದು, ಜೊತೆಗೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಹಾಗಿದ್ರೆ ರಾಜ್ಯ ನಾಯಕರು ಪ್ರಧಾನಿ ಬಳಿ ಇಟ್ಟ ಬೇಡಿಕೆಗಳೇನು? ಎಂದು ತಿಳಿಯೋಣ.

ಪ್ರಧಾನಿ ಮುಂದೆ ಸಿಎಂ ಇಟ್ಟ ಬೇಡಿಕೆಗಳು:
* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆಆರ್‌ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದ್ದು, ಆದಷ್ಟು ಬೇಗ ಬಿಡುಗಡೆ ಮಾಡಲು ಮನವಿ.
* ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
* ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ.

* ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
* ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3 ನೇ ಹಂತದ 44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ ಡಿಪಿಆಆರ್‌ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.
* 73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್‌ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

* ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.
* 15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

* 15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.
* ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ 30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.
* ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡಲು ಕೋರಲಾಗಿದೆ.

ಪಿಎಂ ಭೇಟಿ ಬಳಿಕ ಡಿಕೆಶಿ ಹೇಳಿದ್ದೇನು?
ಪ್ರಧಾನಿ ಭೇಟಿ ಬಳಿಕ ದೆಹಲಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ (D.K Shivakumar) , ನಾನು ಸಿಎಂ, ಪರಮೇಶ್ವರ್ ಹಾಗೂ ಮಹಾದೇವಪ್ಪ ಪ್ರಧಾನಿ ಭೇಟಿ ಮಾಡಿ 40 ನಿಮಿಷ ಚರ್ಚೆ ಮಾಡಿದ್ದೇವೆ. ಮುಖ್ಯವಾಗಿ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಯೋಜನೆ, ಬೆಂಗಳೂರು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದೆ. ಹೀಗಾಗಿ ಅಗತ್ಯ ಕೆಲಸಗಳು ಆಗಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆಯನ್ನು ಪ್ರಧಾನಿಗಳು ನೀಡಿದ್ದಾರೆ. ಗಿಫ್ಟ್ ಸಿಟಿ ರಾಜ್ಯಕ್ಕೊಂದು ಕೊಡುವಂತೆ ಮನವಿ ಮಾಡಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಸಹಕಾರ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Liquor Price: ಮದ್ಯಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಸರಕಾರ

Leave A Reply

Your email address will not be published.