Channapattana By Election: BJP-JDS ಮೈತ್ರಿ ಅಭ್ಯರ್ಥಿಯಾಗಿ ಅಚ್ಚರಿಯ ಮಹಿಳೆ ಕಣಕ್ಕೆ ?! ಯಾರು ಆ ಪವರ್ ಲೇಡಿ ?

Channapattana By Election: ರಾಜ್ಯದಲ್ಲಿ ಉಪಚುನಾವಣೆಯ (Assembly By Election) ಕಾವು ಜೋರಾಗಿದೆ. ಆದರೆ ಚುನಾವಣೆಯ ದಿನಾಂಕ ನಿಗದಿಯಾಗಿದ್ದರೂ ಇನ್ನೂ ಅಭ್ಯರ್ಥಿಗಳ ಆಯ್ಕೆ ಕುತೂಹಲವಾಗಿಯೇ ಉಳಿದಿದೆ. ಅದರಲ್ಲೂ ಚನ್ನಪಟ್ಟಣ(Channapattana) ಅಭ್ಯರ್ಥಿಯ ಆಯ್ಕೆ ಅಂತೂ ಹೆಚ್ಚೆಂದೇ ಹೇಳಬಹುದು. ಇದನ್ನು ಜಿದ್ದಾಗಿ ಪರಿಗಣಿಸಿರುವ ಕಾಂಗ್ರೆಸ್ ಹಾಗೂ ಮೈತ್ರಿ ದೋಸ್ತಿಗಳು ಗೆಲ್ಲಲೇ ಬೇಕೆಂದು ಪಣತೊಟ್ಟಿವೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿವೆ. ಈ ನಡುವೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಅಚ್ಚರಿಯ ಮಹಿಳೆಯನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ ಎನ್ಪುವ ಸುದ್ದಿ ಹೊರಬಿದ್ದಿದೆ.

 

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ(HbD Kumarswamy) ಅವರು ಸ್ಪರ್ಧಿಸಿದ ಕ್ಷೇತ್ರವಾದ ಚನ್ನಪಟ್ಟಣವು ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಪ್ರಮುಖವಾದುದು. ಇದೀಗ ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೂ ಈ ಕ್ಷೇತ್ರದಲ್ಲಿ ನಮ್ಮವರೇ ಗೆಲ್ಲಬೇಕೆಂಬುದು ಅವರ ಅಭಿಲಾಷೆ. ಅದು ಬಿಜೆಪಿ ಆಗಲಿ ಅಥವಾ ಜೆಡಿಎಸ್ ಆಗಲಿ, ಒಟ್ಟು ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ಇಂಗಿತ. ಅಲ್ಲದೆ ಕಾಂಗ್ರೆಸ್ ಕೂಡ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಇದೆಲ್ಲದರ ನಡುವೆ ಪ್ಲಾನ್ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು, ಕಾಂಗ್ರೆಸ್ ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ!!

ಹೌದು, ಡಾ ಸಿ ಎನ್ ಮಂಜುನಾಥ್ ಪತ್ನಿ, ದೇವೇಗೌಡರ ಸುಪುತ್ರಿ ಅನುಸೂಯಾ(Anusuya Mamjunath) ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

Hassan: ಪೊಲೀಸ್‌ ಗಂಡನ ವಿರುದ್ಧ ದೂರು ನೀಡಲೆಂದು ಹೋದ ಹೆಂಡತಿ; ಎಸ್ಪಿ ಕಚೇರಿ ಎದುರಲ್ಲೇ ಪೊಲೀಸ್‌ ಗಂಡನಿಂದ ಪತ್ನಿಯ ಕಗ್ಗೊಲೆ

Leave A Reply

Your email address will not be published.