Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್‌  14 ದಿನ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಿದ್ದು, ಇಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ  ದರ್ಶನ್‌ ಆಂಡ್‌ ಗ್ಯಾಂಗ್‌ ವಿಚಾರಣೆ ನಡೆದಿದೆ.

 

Ananth Ambani Wedding: ಅನಂತ್‌-ರಾಧಿಕಾ ಸಂಗೀತ್‌ಗೆ ಭಾರತಕ್ಕೆ ಬಂದ ಪಾಪ್‌ ಗಾಯಕ ಜಸ್ಟಿನ್‌ ಬೀಬರ್-83 ಕೋಟಿ ರೂ. ಸಂಭಾವನೆ

ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ ಜು.18 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್‌ ಆದೇಶ ನೀಡಿದೆ.

ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳು ಆರ್ಥಿಕ ಅಪರಾಧಗಳ ಕೋರ್ಟ್‌ಗೆ ಹಾಜರಾಗಿದ್ದು, ಈ ವೇಳೆ ಎಸ್‌ ಪಿಪಿ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡುವಂತೆ ಎಸ್‌ ಪಿಪಿ ರಿಮ್ಯಾಂಡ್‌ ಅರ್ಜಿಯನ್ನು ಸಲ್ಲಿಸಿತ್ತು. ಹಾಗಾಗಿ ದರ್ಶನ್‌. ಪವಿತ್ರ ಸೇರಿ ಇತರ ಆರೋಪಿಗಳಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

Bank Job: ಬ್ಯಾಂಕ್ ನಲ್ಲಿ ಉದ್ಯೋಗವಕಾಶ; ‘IBPS’ ನಿಂದ ಆರು ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

 

Leave A Reply

Your email address will not be published.