Yuva Rajkumar Sridevi Divorce: ಯುವ-ಶ್ರೀದೇವಿ ಡಿವೋರ್ಸ್ ಕೇಸ್; ವಿಚಾರಣೆ ದಿನವೇ ಅಮೆರಿಕಾಗೆ ಹೋದ ಯುವ ಪತ್ನಿ, ಇನ್‌ಸ್ಟಾದಲ್ಲಿ ಸುದೀರ್ಘ ಪತ್ರ
Yuva Rajkumar Sridevi Divorce: ಕನ್ನಡ ಚಿತ್ರರಂಗದ ಮೇರು ನಟ ರಾಜ್‌ಕುಮಾರ್ ವಂಶದ ಕುಡಿ ಯುವ ರಾಜ್‌ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪರಿಂದ ಡಿವೋರ್ಸ್ ಬೇಕೆಂದು ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ಅರ್ಜಿ ವಿಚಾರಣೆ ಇಂದು (ಜುಲೈ 04) ರಂದು ನಡೆದಿದೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ಇಂದು ನಡೆದಿದ್ದು, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್ ಆಗಸ್ಟ್ 23 ಕ್ಕೆ ವಿಚಾರಣೆ ಮುಂದೂಡಿದೆ.
Misbehaving: ಕಾಮುಕನ ಹಿಂಸೆಗೆ ರೋಸಿ ಹೋಗಿದ್ದ ಮಹಿಳೆಯರು! ಕೊನೆಗೂ ಬಲೆಗೆ ಸಿಕ್ಕಿಕೊಂಡ ಭೂಪ!
ಸಾಕಷ್ಟು ಆರೋಪ ಪ್ರತ್ಯಾರೋಪಗಳನ್ನು ಗಂಡ-ಹೆಂಡತಿ ಮಾಡಿದ್ದು, ಶ್ರೀದೇವಿ ಅವರು ನಮ್ಮಿಬ್ಬರ ಡಿವೋರ್ಸ್‌ಗೆ ಖ್ಯಾತ ನಟಿಯೇ ನಮ್ಮ ಜೀವನದಲ್ಲಿ ಎಂಟ್ರಿ ಆಗಿದ್ದೇ ಕಾರಣ ಎಂದು ಹೇಳಿದ್ದರು. ಇದೀಗ ಇವತ್ತು ವಿಚಾರಣೆಯ ಸಂದರ್ಭದಲ್ಲಿ ಇನ್‌ಸ್ಟಾದಲ್ಲಿ ಶ್ರೀದೇವಿ ಅವರು ದೊಡ್ಡದಾದ ಒಂದು ಸ್ಟೋರಿ ಹಾಕಿದ್ದಾರೆ. ಏನದು? ಇಲ್ಲಿದೆ ವಿವರ
ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.
ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ. ಆದರೂ ಸಹ, ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಸ್ಥೆರ್ಯಕ್ಕೆ, ಸಹಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ.
ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.
ಹಾರ್ವಡ್‌್ರನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಾಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು, ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ.
ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ ಎಂದು ಬರೆದಿದ್ದಾರೆ.
ಎಂಸಿ ಆಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಯುವರಾಜ್‌ಕುಮಾರ್ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇಂದು ವಿಚಾರಣೆ ಇದ್ದಿದ್ದು, ಶ್ರೀದೇವಿ ಅವರು ಇಂದೇ ಅಮೆರಿಕಕ್ಕೆ ಹೋಗಿದ್ದಾರೆ.