Heavy Rain: Heavy Rain: ಕರಾವಳಿಗೆ ರೆಡ್‌ ಅಲರ್ಟ್‌; 4-5 ದಿನ ಭಾರೀ ಮಳೆ

Share the Article

Heavy Rain: ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಈಗಾಗಲೇ ಭಾರೀ ಮಳೆಯಾಗಿದ್ದು, ಜನ ಜೀವನ ಈ ಕಾರಣದಿಂದ ತತ್ತರಗೊಂಡಿದೆ. ಇದೀಗ ಮತ್ತೆ ಭಾರೀ ಮಳೆಯ ಮುನ್ಸೂಚನೆ ದೊರಕಿದ್ದು ಇದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇದರ ಜೊತೆಗೆ  ಮುಂದಿನ 4-5 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈಗಾಗಲೇ ಭಾರೀ ಮಳೆಯಿಂದ ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕರ್ನಾಟಕದ ಕರಾವಳಿ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗಾಗಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

Leave A Reply