School Holiday: ಮತ್ತೆ ಹೆಚ್ಚಿದ ಮಳೆ; ಜುಲೈ 8ಕ್ಕೆ ಮಂಗಳೂರಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
School Holiday: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು 08/07/2024 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Uttara Pradesh: ಶಾಲೆಯಲ್ಲಿ ಟೀಚರ್-ಪ್ರಿನ್ಸಿಪಾಲ್ ನಡುವೆ ರೋಮ್ಯಾನ್ಸ್; ವೀಡಿಯೋ ವೈರಲ್
ಪ್ರಕಟಣೆ ಉಳಿದ ವಿವರ ಇಲ್ಲಿದೆ;
ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು,
ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ತಾಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು
ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ತಾಲೂಕು ಆಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.
ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
Darshan: ಮೆಸೇಜ್ ಮಾಡಿದ್ದಕ್ಕೆ ನಡೆದಿಲ್ಲ ರೇಣುಕಾ ಸ್ವಾಮಿ ಕೊಲೆ, ಹತ್ಯೆ ಹಿಂದಿದೆ ಅದೊಂದು ರೋಚಕ ಕಾರಣ – ಏನದು?