School Holiday: ಹೆಚ್ಚಿದ ವರುಣನ ಅಬ್ಬರ; ನಾಳೆ( ಜು.9) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ (12ನೇ ತರಗತಿವರೆಗೆ) ದಿನಾಂಕ 09-07-2024 ರಂದು ರಜೆಯನ್ನು ಘೋಷಿಸಲಾಗಿದೆ.
ಹವಾಮಾನ ಇಲಾಖೆ ರೆಡ್‌ಅಲರ್ಟ್ ಘೋಷಣೆ ಮಾಡಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿಯವರಾದ ಮುಲ್ಲೈ ಮುಗಿಲನ್ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ರಜೆ ಘೋಷಣೆ ಮಾಡಿದ್ದಾರೆ.