Government Rules: ಸರ್ಕಾರಿ ಸಮಾರಂಭಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯವೇ? ರಾಜ್ಯ ಸರ್ಕಾರ ಅಂತಿಮ ತೀರ್ಮಾನವೇನು?

ಇಲ್ಲಿದೆ ಮಾಹಿತಿ

Share the Article

Government Rules: ರಾಜ್ಯದ ಎಲ್ಲ ಸರ್ಕಾರಿ ಸಮಾರಂಭಗಳಲ್ಲಿ ಇನ್ಮುಂದೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಹೌದು, ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಲಾಗಿದೆ.

ಮುಂಬರುವ ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಹೊಸ ನಿಯಮವನ್ನು ಸರ್ಕಾರ (Government Rules) ಅಧಿಕೃತ ಆದೇಶ ಹೊರಡಿಸಿದೆ.

Leave A Reply