Job Alert: ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ! ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ: ಕೂಡಲೇ ಅರ್ಜಿ ಸಲ್ಲಿಸಿ

Job Alert: ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್​ನಲ್ಲಿ ಖಾಲಿ ಮ್ಯಾನೇಜ್​ಮೆಂಟ್​ ಟ್ರೈನಿ (ತಾಂತ್ರಿಕ) ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 249 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧೆಡೆಯಲ್ಲಿರುವ ಪ್ರಾಧಿಕಾರದ ಕಾರ್ಯಾಚರಣೆ ಘಟಕ ಮತ್ತು ಗಣಿಗಳಲ್ಲಿ ಹುದ್ದೆಗೆ (Job Alert) ಭರ್ತಿ ನಡೆಯಲಿದೆ.

2nd PUC Students: ದ್ವಿತೀಯ ಪಿಯುಸಿ ಪಾಸಾದವರಿಗೆ ಸಿಹಿ ಸುದ್ದಿ ನೀಡಿದ ಶಿಕ್ಷಣ ಇಲಾಖೆ

ವಿದ್ಯಾರ್ಹತೆ:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ ವಿವರ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ, ಒಬಿಸಿ, ಡಬ್ಲ್ಯೂಎಸ್​ ಅಭ್ಯರ್ಥಿಗಳಿಗೆ 700 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:

 ಗೇಟ್​ 2024 ಅಂಕ, ಗ್ರೂಪ್​ ಡಿಸ್ಕಷನ್​ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sail.co.in ಇಲ್ಲಿಗೆ ಭೇಟಿ ನೀಡಿ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ: ಈ 5/07/2024

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 25/07/2024 ಆಗಿದೆ.

Government Rules: ಸರ್ಕಾರಿ ಸಮಾರಂಭಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯವೇ? ರಾಜ್ಯ ಸರ್ಕಾರ ಅಂತಿಮ ತೀರ್ಮಾನವೇನು?

Leave A Reply

Your email address will not be published.