Deadly Accident: ಡಬ್ಬಲ್‌ ಡೆಕ್ಕರ್‌ ಬಸ್‌-ಟ್ಯಾಂಕರ್‌ ಬಸ್‌ ಮುಖಾಮುಖಿ ಡಿಕ್ಕಿ-18 ಜನ ಸಾವು

Share the Article

Deadly Accident: ಲಕ್ನೋ ಆಗ್ರೋ ಎಕ್ಸ್‌ಪ್ರೆಸ್ ವೇಯಲ್ಲಿ ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ (Deadly Accident)ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಮಹಿಳೆಯೂ ಮಕ್ಕಳು ಸೇರಿ, 18 ಜನ ಪ್ರಯಾಣಿಕರು ಭೀಕರವಾಗಿ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಬಿಹಾರದ ಸೀತಾಮರ್ಹಿಯಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಬರುತ್ತಿದ್ದ ಬಸ್ ಎಕ್ಸ್‌ಪ್ರೆಸ್‌ ವೇಯಲ್ಲಿ ಹಾಲಿನ ಟ್ಯಾಂಕರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಸ್ ಡಿಕ್ಕಿ ಹೊಡೆದ ರಭಸ ಎಷ್ಟು ತೀವ್ರವಾಗಿತ್ತೆಂದರೆ ಬಸ್‌ನಲ್ಲಿದ್ದ ಜನ ಬಸ್‌ನಿಂದ ಹೊರಗೆ ಎಸೆಯಲ್ಪಟ್ಟಿದ್ದು, ನೆಲದ ಮೇಲೆ ದೇಹಗಳು ಪ್ರಯಾಣಿಕರ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Modi Government: ಅಧಿಕಾರಕ್ಕೆ ಬಂದು ತಿಂಗಳು ಆಗುತ್ತಿದ್ದಂತೆ ದೇಶದ ರೈತರಿಗೆ ಬಂಪರ್ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ !!

 

ಈ ಅವಘಢದಲ್ಲಿ 18 ಜನ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ ಇನ್ನೂ 19 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉನ್ನಾವೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಥಿ ಹೇಳಿದ್ದಾರೆ. ಸದ್ಯ ಈ ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ವಿಷಾದ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 

 

Leave A Reply