CM Siddaramaiah: ಮುಡಾ ಹಗರಣ ತನಿಖೆ ಸಿಬಿಐಗೆ ಒಪ್ಪಿಸಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

CM Siddaramaiah: Mysuru Urban Development Authority (MUDA) ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ, ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಖಡಕ್ ಆಗಿ ಮಾಧ್ಯಮ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು, ಮುಡಾ ಹಗರಣದ ಹೆಸರು ಹೇಳುತ್ತಿದಂತೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ (CM Siddaramaiah) , ಮೈಸೂರಿನಲ್ಲಿ ಮಾತನಾಡಿದ ಅವರು, ಎಷ್ಟು ಸಲ ಇದರ ಬಗ್ಗೆ ಹೇಳುವುದು? ಮತ್ತೆ ಮತ್ತೆ ಕೆದಕಬೇಡಿ. ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ ಎಂದರು. ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದರು. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ ಎಂದರು.

ಇನ್ನು ಈ ಬಗ್ಗೆ ಸುಮ್ಮನೇ ಪ್ರತಿಭಟನೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ. ಮುಡಾ ಅಕ್ರಮದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತಪ್ಪಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾದರೆ ಎಲ್ಲರೂ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಮುಖ್ಯವಾಗಿ ಪ್ರಕರಣ ಸಿಬಿಐಗೆ ವಹಿಸುವ ವಿಚಾರ‌ವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರನೇ ಸಮರ್ಥರಿಲ್ಲವಾ? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್​​​ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ ಎಂದು ಕಿಡಿ ಕಾರಿದರು. ಈಗೀನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು. ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ಮುಡಾ ಹಗರವನ್ನ ಸಿಬಿಐಗೆ ವಹಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ನಿರಾಕರಿಸಿದರು.

Karnataka Government : ಗ್ಯಾರಂಟಿ ಭಾರ ತಪ್ಪಿಸಲು ಸರ್ಕಾರದಿಂದ ಮಾಸ್ಟರ್ ಪ್ಲಾನ್ – ಇವರೆಲ್ಲಾ ಗ್ಯಾರಂಟಿಯಿಂದ ಔಟ್ ಆಗೋದು ಫಿಕ್ಸ್!!

 

Leave A Reply

Your email address will not be published.