Aparna died: ಕನ್ನಡದ ಖ್ಯಾತ ನಿರೂಪಕಿ, ಮಜಾ ಟಾಕೀಸ್ ಖ್ಯಾತಿಯ ನಟಿ ಅಪರ್ಣ ವಸ್ತಾರೆ ವಿಧಿವಶ !

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (Aparna vasthare). ಅವರಿಗೆ 52 ವರ್ಷ ವಯಸ್ಸಾಗಿತ್ತು.

ಶುದ್ಧ ಕನ್ನಡ, ಆಸಕ್ತಿಕರ ಮಾತಿನ ಶೈಲಿ ಹಾಗೂ ನಟನೆಯಿಂದ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದ ಅಪರ್ಣಾ ಅವರು ಕ್ಯಾನ್ಸರ್ ರೋಗದಿಂದ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಹಲವು ತಿಂಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತೀಚೆಗೆ ಅವರು ಸೃಜನ್ ಲೋಕೇಶ್ ರವರ ಮಜಾ ಟಾಕೀಸ್ ಕಾರ್ಯಕ್ರಮದಿಂದ ಮತ್ತೊಮ್ಮೆ ಜನಪ್ರಿಯತೆ ಗಳಿಸಿದ್ದರು. ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ, ಧಾರವಾಹಿಗಳಲ್ಲೂ ಅಪರ್ಣಾ ನಟಿಸಿದ್ದರು.

ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದರು ಅಪರ್ಣಾ. ಅಲ್ಲದೆ ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು. ಸರಿ ಸುಮಾರು 30 ವರ್ಷಗಳಿಗೂ ಮಿಕ್ಕಿ ಮಾಧ್ಯಮದ ಜೊತೆ ಗುರುತಿಸಿಕೊಂಡಿದ್ದ ಎವರ್ ಯಂಗ್ ನಿರೂಪಕಿ ಅಪರ್ಣ ಈಗಿಲ್ಲ!

ಅವರು 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡಾ ಅಪರ್ಣ ಕಾರ್ಯ ನಿರ್ವಹಿಸಿದ್ದರು. ಈಗ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರ ರಂಗದ ಅನೇಕ ನಟ/ನಟಿಯರು ಅಪರ್ಣಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Leave A Reply

Your email address will not be published.