Prahalad Joshi: ಮುಡಾ ಹಗರಣ- ಸದ್ಯದಲ್ಲೇ ಅರೆಸ್ಟ್ ಆಗ್ತಾರಾ ಸಿಎಂ ಸಿದ್ದರಾಮಯ್ಯ?

Prahalad Joshi: ಕಳೆದು ಕೆಲವೊಂದಿಷ್ಟು ದಿನಗಳಿಂದ ರಾಜ್ಯದಲ್ಲಿ ಮುಡಾ ಹಗರಣ(Muda Scam) ಭಾರೀ ಸದ್ದು ಮಾಡುತ್ತಿದೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಹಗರಣದ ವಿರುದ್ಧ ಪ್ರತಿಭಟಿಸುತ್ತಿರುವ ಬಿಜೆಪಿ ಸಿಎಂ ರಾಜಿನಾಮೆ ನೀಡಬೇಕು, ಸಿಬಿಐ(CBI) ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದೆ. ಅಲ್ಲದೆ ಪ್ರತಿಭಟನೆ ನಿರತ ಬಿಜೆಪಿ ನಾಯಕರನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬಿಜೆಪಿ(BJP) ನಾಯಕರ ಬಂಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Prahalad Joshi) ಕಿಡಿಕಾರಿದ್ದು, ಮುಡಾ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯನವರೇ(CM Siddaramaiah) ನೀವೇ ಅರೆಸ್ಟ್ ಆಗುತ್ತೀರಾ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

 

ಹೌದು, ಬಿಜೆಪಿ ನಾಯಕರ ಬಂಧನಕ್ಕೆ ಕಿಡಿ ಕಾರಿರುವ ಸಚಿವ ಜೋಶಿ ‘ಸಿದ್ದರಾಮಯ್ಯನವರೇ ನೀವು ನಮ್ಮನ್ನು ಬಂಧಿಸುತ್ತೀರಾ? ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು. ಅಗತ್ಯ ಬಿದ್ದರೆ ಈ ಪ್ರಕರಣದಲ್ಲಿ ನಾವು ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ. ನಮಗೆ ಹೋರಾಟ ಮಾಡಲು ಹಕ್ಕು ಇಲ್ವಾ? ಕಾಂಗ್ರೆಸ್ ಪಕ್ಷದ ಹೈಕಮಾಂಡ್​​ಗೆ ಕಮಾಂಡ್ ಇದ್ದರೆ, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಪಡೆಯಿರಿ ಎಂದು ಹೇಳಿರುವ ಜೋಶಿ, ಸಿದ್ದರಾಮಯ್ಯರೇ ಇಂದಿರಾ ಗಾಂಧಿ ಸಹ ಹೀಗೇ ಇದ್ದರು ಎಂದು ಕಿಡಿಕಾರಿದ್ದಾರೆ.

ಅಲ್ಲದೆ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸೈಟ್ ಧರ್ಮಪತ್ನಿ ಹೆಸರಲ್ಲಿದೆ ಅಂತಾರೆ. ನೀವು ಅಧಿಕಾರಕ್ಕೆ ಬಂದ ಕೂಡಲೇ ಇದನ್ನು ಗಮನಿಸಿ ವಾಪಸ್ ಕೊಡಬೇಕಿತ್ತಲ್ಲವೇ? ಯಾಕೆ ಮಾಡಲಿಲ್ಲ ಈಗ 50:50 ಅನುಪಾತವೇ ಇಲ್ಲ. ನಿಮಗೆ ಜಮೀನು ಕೊಟ್ಟವನ ಅಸ್ತಿತ್ವವೇ ಯಕ್ಷ ಪ್ರಶ್ನೆಯಾಗಿದೆ’ ಎಂದು ಜಾಡಿಸಿದ್ದಾರೆ.

ಏನದು ಮುಡಾ ಹಗರಣ?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ( Mysore Urban Development Authority- MUDA) ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.

50-50 ಅನುಪಾತ ಅವ್ಯವಹಾರವೇನು?
ಯಾವುದೇ ಒಂದು ಬಡಾವಣೆ ನಿರ್ಮಾಣ ಮಾಡುವಾಗ ನಗರಾಭಿವೃದ್ಧಿ ಪ್ರಾಧಿಕಾರಿಗಳು ರೈತರನ್ನು ಒಪ್ಪಿಸಿ ಭೂಸ್ವಾಧೀನ ಮಾಡಬೇಕಾಗುತ್ತದೆ. ಹೀಗೆ ಮಾಡುವ ಸಂದರ್ಭದಲ್ಲಿ ರೈತರಿಗೆ ಪರಿಹಾರ ರೂಪದಲ್ಲಿ ಭೂಮಿಯ ಮೌಲ್ಯದಷ್ಟೇ ಹಣವನ್ನು ಅಥವಾ ಲೇಔಟ್ ಮಾಡುವಾಗ ಶೇ 50ರಷ್ಟು ನಿವೇಶನಗಳನ್ನು ನೀಡಬೇಕೆಂಬ ಒಪ್ಪಂದವಾಗುತ್ತದೆ. ಇವೆರಡೂ ಅಲ್ಲದಿದ್ದರೆ ವಶಪಡಿಸಿಕೊಂಡ ಭೂಮಿಯ ಮೌಲ್ಯದಷ್ಟೇ ಭೂಮಿಯನ್ನು ಇನ್ನೊಂದು ಕಡೆ ಗುರುತು ಮಾಡಿ ನೀಡುವುದು ಪ್ರಾಧಿಕಾರದ ಹೊಣೆಗಾರಿಕೆಯಾಗಿರುತ್ತದೆ.

ಆದರೆ ಮೈಸೂರಿನಲ್ಲಿ ನಿರ್ಮಿಸಲ್ಪಟ್ಟ ಬಡಾವಣೆಗಳಲ್ಲಿ ಆ ರೀತಿ ಯಾವುದೇ ಮಾನದಂಡವನ್ನು ಅನುಸರಿಸಲಾಗಿಲ್ಲ ಎಂಬುದು ಈಗ ಕೇಳಿ ಬಂದಿರುವ ಆರೋಪವಾಗಿದೆ. ಹಲವಾರು ಪ್ರಕಣದಲ್ಲಿ ಭೂ ಮಾಲೀಕರಿಗೆ ಪರಿಹಾರ ನೀಡಿಲ್ಲ. ಶೇಕಡಾ 50ರಷ್ಟು ನಿವೇಶನಗಳನ್ನೂ ನೀಡಿಲ್ಲ, ಬೇರೆಡೆ ಭೂಮಿಯನ್ನೂ ನಿಗದಿಪಡಿಸಿಲ್ಲ. ಅದಕ್ಕೆ ಬದಲಾಗಿ ಅರ್ಜಿಗಳಲ್ಲಿನ ಹಿರಿತನ ಪರಿಗಣಿಸದೆ ಅಕ್ರಮವಾಗಿ ಸೈಟ್ ಗಳನ್ನು ನೀಡಲಾಗಿದೆ ಎಂಬುದು ಕೇಳಿ ಬಂದಿರುವ ಆರೋಪವಾಗಿದೆ.

Gruhalakshmi Scheme : ತಾಳ್ಮೆ ಕಳೆದುಕೊಂಡ ಸರ್ಕಾರ- ಈ ಮಹಿಳೆಯರನ್ನು ‘ಗೃಹಲಕ್ಷ್ಮೀ’ಯಿಂದ ಹೊರಗಿಡಲು ನಿರ್ಧಾರ, BPL ಕಾರ್ಡ್ ನಿಂದ ಹೆಸರು ಕೂಡ ಡಿಲೀಟ್ !!

Leave A Reply

Your email address will not be published.