Assault: ಬಸ್ಸಿನಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಹಿಳೆಯರಿಂದ ಧರ್ಮದೇಟು ತಿಂದ ಪ್ರಯಾಣಿಕ

Share the Article

Assault: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಅಪ್ರಾಪ್ತ ವಯಸ್ಸ ಬಾಲಕಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಕೂಡಲೇ ಆರೋಪಿಗೆ ಬಸ್ಸಿನಲ್ಲಿದ್ದ ಸಹ ಪ್ರಯಾಣಿಕರು ಹಲ್ಲೆ ನಡೆಸಿರುವ ಘಟನೆಯೊಂದು ಶಿರಾಡಿ ಘಾಟ್‌ ಪರಿಸರದಲ್ಲಿ ನಡೆದಿದೆ.

ಈ ಕುರಿತ ವೀಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅಪ್ರಾಪ್ತ ಬಾಲಕಿಯ ಕುಟುಂಬವು ಧರ್ಮಸ್ಥಳಯಾತ್ರೆ ಕೈಗೊಂಡಿದ್ದು, ಬಾಲಕಿ ಕುಳಿತಿದ್ದ ಆಸನದ ಸನಿಹದಲ್ಲೇ ಕುಳಿತಿದ್ದ ಅನ್ಯಕೋಮಿನ ವ್ಯಕ್ತಿ ಬಾಲಕಿಗೆ ಲೈಂಗಿಕ ಹಿಂಸೆ ನೀಡುವುದನ್ನು ಪ್ರಯಾಣಿಕರು ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಾಲಕಿ ಈ ಸಂದರ್ಭದಲ್ಲಿ ತನ್ನ ಸಂಬಂಧಿಕರಲ್ಲಿ ಇದನ್ನು ತಿಳಿಸಿದ್ದಾಳೆ. ಕೂಡಲೇ ಬಸ್ಸಿನಲ್ಲಿದ್ದ ಮಹಿಳಾ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಹೊಡೆದಿದ್ದಾರೆ.

ಈ ಸಂದರ್ಭದಲ್ಲಿ ಕಿರುಕುಳ ನೀಡಿದ ವ್ಯಕ್ತಿಯ ಬೆಂಬಲಿಗನೋರ್ವ ಹೊರಗಿನವರಿಗೆ ಫೋನ್‌ ಮೂಲಕ ಇದನ್ನು ತಿಳಿಸಿದ್ದು, ಆ ನಂತರ ಕೆಲವು ಬಸ್ಸಿನೊಳಗೆ ಬಂದು ವೀಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿಯನ್ನು ವಿಚಾರಿಸಲು ಮುಂದಾಗಿದ್ದಾರೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ವೀಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿಯನ್ನು ಉಪ್ಪಿನಂಗಡಿಯಿಂದ ಆತನ ಮನೆಗೆ ಸುರಕ್ಷಿತವಾಗಿ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ ಎಂದು ವರದಿಯಾಗಿದೆ.

Leave A Reply