Nithin Ghadkari: ತನ್ನದೇ ಪಕ್ಷ ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ !!

Nithin Gadkhari: ಕೇಂದ್ರ ಸಚಿವ, ಬಿಜೆಪಿ ಪಕ್ಷದ ಪ್ರಬಲ ನಾಯಕ ನಿತಿನ್ ಗಡ್ಕರಿ ಅವರು ಸ್ವಪಕ್ಷ ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದು ಕಾಂಗ್ರೆಸ್ ಮಾಡಿದ ತಪ್ಪುಗಳನ್ನು ನಾವು ಮಾಡಬಾರದೆಂದು ತಿಳಿ ಹೇಳಿದ್ದಾರೆ.

By Election: ದೇಶಾದ್ಯಂತ ನಡೆದ ಉಪಚುನಾವಣೆ- ಮತ್ತೆ ಮುಗ್ಗರಿಸಿದ NDA, ಇಂಡಿಯಾ ಕೂಟಕ್ಕೆ ಭರ್ಜರಿ ಗೆಲುವು !!

ಹೌದು, ಭಾರತೀಯ ಜನತಾ ಪಾರ್ಟಿಯು(BJP) ಇಡೀ ದೇಶದಲ್ಲೇ ವಿಭಿನ್ನ ಸಿದ್ಧಾಂತ ಹೊಂದಿರುವ ಪಕ್ಷವಾಗಿದ್ದು, ಜನರ ವಿಶ್ವಾಸ ಗಳಿಸುತ್ತಿದೆ. ಇದಕ್ಕಾಗಿಯೇ ಜನ ಮತ್ತೆ ಮತ್ತೆ ಆರಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಮಾಡಿದ ತಪ್ಪುಗಳನ್ನೇ ನಾವು ಮತ್ತೆ ಮಾಡಬಾರದು. ಹಾಗೇನಾದರೂ ಮಾಡಿದರೆ ಜನರ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ ಎಚ್ಚರವಿರಲಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಗೋವಾ(Goa) ಬಿಜೆಪಿ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ನಾವು ಕಾಂಗ್ರೆಸ್ ಮಾಡಿದ ತಪ್ಪುಗಳನ್ನು ಮುಂದುವರಿಸಿದರೆ ಅವರ ನಿರ್ಗಮನ ಮತ್ತು ನಮ್ಮ ಪ್ರವೇಶದಿಂದ ಯಾವುದೇ ಪ್ರಯೋಜನವಿಲ್ಲ. ನಾವು ಭಿನ್ನತೆ ಹೊಂದಿರುವ ಪಕ್ಷ ಎಂದು ಅಡ್ವಾಣಿ ಹೇಳುತ್ತಿದ್ದರು. ನಾವು ಇತರ ಪಕ್ಷಗಳಿಗಿಂತ ಎಷ್ಟು ಭಿನ್ನವಾಗಿದ್ದೇವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಅದಕ್ಕಾಗಿಯೇ ಅದು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ. ಅಧಿಕಾರದಿಂದ ನಿರ್ಗಮಿಸಿದ ಕಾಂಗ್ರೆಸ್‌ನ ಹಿಂದಿನ ತಪ್ಪುಗಳನ್ನು ಪುನರಾವರ್ತಿಸಿದರೆ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಅವರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ನಾವು ಭ್ರಷ್ಟಾಚಾರ ಮುಕ್ತ ದೇಶವನ್ನು ರಚಿಸಬೇಕಾಗಿದೆ ಮತ್ತು ಅದಕ್ಕಾಗಿ ನಾವು ಯೋಜನೆಯನ್ನು ಹೊಂದಿರಬೇಕು. ನಾನು ಈ ಪ್ರವೃತ್ತಿಯನ್ನು ಅನುಸರಿಸದಿರಲು ನಿರ್ಧರಿಸಿದ್ದೇನೆ. ನಾನು ಜಾತಿ ರಾಜಕಾರಣದಲ್ಲಿ ತೊಡಗುವುದಿಲ್ಲ ಎಂದು ನಾನು ಜನರಿಗೆ ಹೇಳಿದ್ದೇನೆ. ಜಾತಿಗಳ ಬಗ್ಗೆ ಮಾತನಾಡುವವರನ್ನು ಅಧಿಕಾರದಿಂದ ಹೊರಹಾಕಲಾಗುತ್ತದೆ ಅಷ್ಟೇ ಎಂದು ಎಚ್ಚರಿಸಿದರು.

Chamaraja Nagara: ಸಿಎಂ ಸಿದ್ದರಾಮಯ್ಯಗೆ ರೈತರು, ಸಾರ್ವಜನಿಕರಿಂದ ಮನವಿ ಪತ್ರ- ಕೆಲವೇ ಹೊತ್ತಲ್ಲಿ ಎಲ್ಲವೂ ಕಸದ ಬುಟ್ಟಿಯಲ್ಲಿ ಪ್ರತ್ಯಕ್ಷ !!

Leave A Reply

Your email address will not be published.