School Holiday: ದ.ಕ. ಭಾರೀ ಮಳೆಯ ಕಾರಣ ಇಂದು (ಜು.15) ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ
School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ ಇರುವ ಕಾರಣ ಜು.15 (ಇಂದು) ರಂದು ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಂಗಳೂರು ಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.15 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕುರಿತು ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಈ ಮೊದಲೇ ನೀಡಿತ್ತು. ಅಲ್ಲದೇ ಕರಾವಳಿಯಲ್ಲಿ ರೆಡ್ ಅಲರ್ಟ್ ಕೂಡಾ ಘೋಷಣೆ ಮಾಡಲಾಗಿತ್ತು.
ಜಿಲ್ಲೆಯಾದ್ಯಂತ ರವಿವಾರ ಭಾರೀ ಮಳೆಯಾಗಿದೆ. ಜು.16 ರಿಂದ ಜು.18 ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಭಾರೀ ಮಳೆಯ ಕಾರಣ ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಿಗೆ ಕೂಡಾ ಜು.15 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ಆದೇಶ ನೀಡಿದ್ದರು. ಜಿಲ್ಲೆಯ ಸಿಬಿಎಸ್‌ಇ, ಐಸಿಎಸ್‌ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದ್ರಸ ಮೊದಲಾದವುಗಳಿಗೆ ರಜೆ ಸಾರಲಾಗಿದೆ. ಕಾಲೇಜುಗಳಿಗೆ ಈ ರಜೆ ಅನ್ವಯವಾಗುವುದಿಲ್ಲ, ಪೂರ್ವಭಾವಿ ನಿರ್ಧಾರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ತಿಳಿಸಿದ್ದಾರೆ.