School Holiday: ಮುಂದುವರಿದ ವರುಣನ ಅಬ್ಬರ; ನಾಳೆ (ಜು.16) ದ.ಕ, ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Share the Article

School Holiday: ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಈ ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು, ಪಿಯುಸಿವರೆಗೆ ಜುಲೈ 16 (ನಾಳೆ) ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಭಾರೀ ಮಳೆ ಸುರಿಯುತ್ತಿದೆ.

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿರುವ ಹಿನ್ನೆಲೆ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಂಜುಳಾ ಅವರು ನಾಳೆ (ಮಂಗಳವಾರ) ಪದವಿ ಪೂರ್ವ ಇಲಾಖೆ ವ್ಯಾಪ್ತಿಯಲ್ಲಿರುವ ಕೊಡಗು ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

 

Leave A Reply

Your email address will not be published.