Reservation: ನಾಡಿನ ಜನತೆಗೆ ಭರ್ಜರಿ ಸುದ್ದಿ, ಇನ್ಮುಂದೆ ರಾಜ್ಯದ ಖಾಸಗಿ ಕಂಪೆನಿಗಳಲ್ಲೂ ಕನ್ನಡಿಗರಿಗೆ ಸಿಗಲಿದೆ 100% ಮೀಸಲಾತಿ !!
Resrvation: ಇಂದು ಸರ್ಕಾರಗಳು ಕಾಲ ಕಾಲಕ್ಕೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದ ಕಾರಣ, ಖಾಸಗಿ ವಲಯದಲ್ಲೂ ರಾಜ್ಯದ ಜನತೆಗಾಗಿ ಮೀಸಲಾತಿ(Reservation) ತರದೆ, ಹೊರ ರಾಜ್ಯದವರಿಗೆ ಎಲ್ಲಾ ರೀತಿಯಿಂದಲೂ ಹೆಚ್ಚು ಪ್ರಾಮುಖ್ಯತೆ ನೀಡಿದ ಕಾರಣ ರಾಜ್ಯದಲ್ಲಿ ನಿರುದ್ಯೋಗ ಸ್ಪೋಟಗೊಂಡಿದೆ. ನಮ್ಮ ನೆಲದಲ್ಲೇ ನಮಗೆ ಉದ್ಯೋಗ ದೊರೆಯದಾಗಿದೆ.
ಹೀಗಾಗಿ ಎಲ್ಲಾ ರೀತಿಯ ಉದ್ಯೋಗ, ಕಂಪೆನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಿ, ಮೊದಲು ಕನ್ನಡಿಗರಿಗೆ ಆದ್ಯತೆ ನೀಡಿ ಎಂಬುದು ಹೋರಾಟಗಾರರ, ಕರುನಾಡಿಗರ ಕೂಗಾಗಿತ್ತು. ಇದುವರೆಗಿನ ಸರ್ಕಾರಗಳು ಭರವಸೆಯನ್ನಷ್ಟೇ ನೀಡಿದವು. ಆದರೀಗ ಇದರ ಪರಿಣಾಮ ಅರಿತ ಸಿದ್ದರಾಮಯ್ಯ ಸರ್ಕಾರ ಖಾಸಗಿ ಕಂಪೆನಿಗಳಲ್ಲೂ ಕನ್ನಡಿಗರಿಗೆ ಕಡ್ಡಾಯ ಮೀಸಲಾತಿ(Reservation For Private Sector) ಕೊಡಿಸಲು ಮುಂದಾಗಿದೆ.
ಹೌದು, ರಾಜ್ಯದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಕೈಗಾರಿಕೆಗಳ ಉದ್ಯೋಗಗಳು ಉತ್ತರ ಭಾರತದ ರಾಜ್ಯಗಳವರ ಪಾಲಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸುವುದು ಸೇರಿದಂತೆ ಏಳು ವಿಧೇಯಕಗಳನ್ನು ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇಷ್ಟೇ ಅಲ್ಲದೆ ರಾಜ್ಯದಲ್ಲಿನ ಭೂಮಿ, ನೀರು ಸೇರಿ ಮೂಲಸೌಕರ್ಯ ಪಡೆಯುವ ಕೈಗಾರಿಕೆಗಳು ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಇಲಾಖೆಯು ವಿಧೇಯಕ ರೂಪಿಸಿದ್ದು, ಇದಕ್ಕೆ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಅಂದಹಾಗೆ ಇನ್ನು 2022ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡಿಸಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಯಲ್ಲೂ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ ಹಾಗೂ ಇತರೆ ಸೌಲಭ್ಯ ಪಡೆದ ಕೈಗಾರಿಕೆಗಳಲ್ಲಿ ಮೀಸಲು ನೀಡಬೇಕು ಎಂದು ಹೇಳಲಾಗಿತ್ತು. ಆದರೆ ಇದಕ್ಕೂ ನೀತಿ ನಿಯಮಗಳನ್ನು ಜಾರಿ ಮಾಡಿರಲಿಲ್ಲ. ಹೀಗಾಗಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಶೇ.100ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Dakshina Kannada: ಉಳ್ಳಾಲದಲ್ಲಿ ವಿದ್ಯುತ್ ಕಂಬವೇರಿದ ಹೆಬ್ಬಾವು; ವಿದ್ಯುತ್ ಸ್ಪರ್ಶಿಸಿ ಸಾವು