H D Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್ ಡಿ ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

H D Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಘಟನೆಯೊಂದು ನಡೆದಿದೆ.
ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿದೆ. ಈ ಕಾರಣದಿಂದ ಹೊಳೆನರಸೀಪುರ ಸರಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೆಚ್ ಡಿ ರೇವಣ್ಣ ಅವರು ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದು, ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದ್ದಿದ್ದಾರೆ. ಹೀಗಾಗಿ ಪಕ್ಕೆಲುಬಿಗೆ ಪೆಟ್ಟಾಗಿದೆ. ಚಿಕಿತ್ಸೆ ಮುಂದುವರಿದಿದೆ.
Crime: ಪತ್ನಿ ಮೇಕಪ್ ಮಾಡುತ್ತಾಳೆ ಎಂಬ ಸಿಲ್ಲಿ ಕಾರಣ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಪತಿ ಹುಸೇನ್
Hi, Neat post. There is an issue along with your web site in web explorer, could test this… IE nonetheless is the marketplace leader and a big component of people will omit your excellent writing because of this problem.