Heavy Rain: ಮುಂದುವರಿಯಲಿದೆ ಭಾರೀ ಮಳೆ; ದ.ಕ., ಉಡುಪಿ ಜಿಲ್ಲೆಗೆ ಜು.18, 19 ರಂದು ʼರೆಡ್‌ ಅಲರ್ಟ್‌

Share the Article

Heavy Rain: ಭಾರೀ ಮಳೆಯ ಕಾರಣ ಮುಂದಿನ ಎರಡು ದಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18,19 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಇಂದು ಕೂಡಾ ಒಳ್ಳೆಯ ಮಳೆ ಸುರಿದಿದ್ದು, ಮುಂದಿನ ಎರಡು ದಿನ ಕೂಡಾ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದರ ಜೊತೆಗೆ ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಗುರುವಾರ (ಜುಲೈ 18) ರಂದು ರಜೆ ಘೋಷಣೆ ಮಾಡಲಾಗಿದೆ.

ತೀರ್ಥಹಳ್ಳಿ, ಸಾಗರ, ಸೊರಬ ತಾಲ್ಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಗುರುವಾರ ಘೋಷಣೆ ಮಾಡಲಾಗಿದೆ. ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಕಾರಣ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್‌ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ದಿನಾಂಕ 18-07-2024 ಗುರುವಾರ ರಜೆ ಘೋಷಿಸಿದೆ.

Leave A Reply