Crime: ಪತ್ನಿ ಮೇಕಪ್ ಮಾಡುತ್ತಾಳೆ ಎಂಬ ಸಿಲ್ಲಿ ಕಾರಣ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಪತಿ ಹುಸೇನ್

Share the Article

Crime: ವಿಚಿತ್ರ ಕಾರಣಕ್ಕೆ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಪತ್ನಿಯ ಡ್ರೆಸ್ ಹಾಗೂ ಮೇಕಪ್ ಬಗ್ಗೆ ಗಲಾಟೆ ನಡೆದು, ಬಳಿಕ ಪತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ತೊಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಅಸ್ಸಾಂ ಮೂಲದ ಗುಲ್ಜರ್ ಹುಸೇನ್ ಚೌದರಿ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತನಿಗೆ ಕೇವಲ ಮೂರು ವರ್ಷಗಳ ಹಿಂದೆ ಮದುವೆಯಾಗಿತ್ತು. ಆತ ಕುಲ್ಸುಮ್ ಬೇಗಂ ಜೊತೆ ಮದುವೆ ಮಾಡಿಕೊಂಡಿದ್ದು, ನೆಲಮಂಗಲಕ್ಕೆ ಬಂದು ಖಾಸಗಿ ಟ್ರಾನ್ಸ್ಪೋರ್ಟ್ ಕಂಪನಿಯಲ್ಲಿ ಗುಲ್ಜರ್ ಡ್ರೈವರ್ ಆಗಿದ್ದ. ಈಗ ತನ್ನ ಪತ್ನಿ ನಿದ್ರಿಸುತ್ತಿದ್ದ ವೇಳೆ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ಹೆಚ್ಚಾಗಿ ಮೇಕಪ್ ಮಾಡಿಕೊಳ್ಳಲು ಉತ್ಸುಕಲಾಗಿದ್ದು ಅದರ ಹುಡುಕಾಟದಲ್ಲಿ ಹೆಚ್ಚು ಸಮಯ ಮೊಬೈಲ್ ನಲ್ಲಿಯೇ ಕಾಲ ಕಳೆಯುತ್ತಿದ್ದರಂತೆ. ಎಷ್ಟೇ ಬುದ್ಧಿ ಹೇಳಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಅವರಿಬ್ಬರ ಮಧ್ಯೆ ಜಗಳವಾಗಿತ್ತು. ಇದರಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave A Reply