School Holiday: ಭಾರೀ ಮಳೆಯ ಕಾರಣ, ದ.ಕ ಜಿಲ್ಲೆಯ ಈ ತಾಲ್ಲೂಕುಗಳ ಶಾಲಾ, ಕಾಲೇಜಿಗೆ ಜು.18 (ನಾಳೆ) ರಜೆ ಘೋಷಣೆ

School Holiday: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಎಡಬಿಡದೇ ಸುರಿಯುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.18) ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲ್ಲೂಕುಗಳಿಗೆ 18-ಜುಲೈ-2024ಕ್ಕೆ ಮಳೆಯ ಕಾರಣಕ್ಕೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜಿಗೆ ರಜೆ ಘೋಷಿಸಿಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ದಿನಾಂಕ 18-07-2024 ಗುರುವಾರ ರಜೆ ಘೋಷಿಸಿದೆ.

ಇದರ ಜೊತೆಗೆ ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಗುರುವಾರ (ಜುಲೈ 18) ರಂದು ರಜೆ ಘೋಷಣೆ ಮಾಡಲಾಗಿದೆ.

ತೀರ್ಥಹಳ್ಳಿ, ಸಾಗರ, ಸೊರಬ ತಾಲ್ಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಗುರುವಾರ ಘೋಷಣೆ ಮಾಡಲಾಗಿದೆ. ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಕಾರಣ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್‌ ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.