Dakshina Kannada ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿನ್ನು ಧಾರ್ಮಿಕ ಆಚರಣೆಗೆ ನಿಷೇಧ – ಶಾಸಕ ಹರೀಶ್ ಪೂಂಜಾ ಹೇಳಿದ್ದಿಷ್ಟು!!
Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಶಾಲೆಗಳ ಆವರಣಗಳಲ್ಲಿ ಇನ್ಮುದೆ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ಅಥಲಾ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(DDPI) ಆದೇಶ ಹೊರಡಿಸಿದ್ದಾರೆ.
ಹೌದು, ಈವರೆಗೂ ದ.ಕ(Dakshina Kannad ಜಿಲ್ಲಾ ಶಾಲಾ ಆವರಣಗಳಲ್ಲಿ ಸಾರ್ವಜನಿಕವಾಗಿ ನಡೆಯುತ್ತಿದ್ದ ಕೃಷ್ಣಾಷ್ಟಮಿ(Krishnastami) , ಗಣೇಶೋತ್ಸವ (Ganeshotsava) ಮುಂತಾದ ಹಬ್ಬಗಳ ಆಚರಣೆಗೆ ಇನ್ಮುಂದೆ ನಿಷೇಧ ಹೇರಲಾಗಿದೆ. .ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(ಡಿಡಿಪಿಐ) ಈ ಕುರಿತು ಹೊರಡಿಸಿದ ಜ್ಞಾಪನಾ ಪತ್ರ ಈಗ ವಿವಾದಕ್ಕೆ ಕಾರಣವಾಗಿದೆ.
ಹಬ್ಬಗಳ ಆಚರಣೆ ಕುರಿತು ನಾಗರಿಕ ಸಮಿತಿ ಮುಖಂಡರು ಶಾಲೆಗಳಿಗೆ ಭೇಟಿ ನೀಡಿ ಅನುಮತಿ ಕೇಳಿದಾಗ ಶಿಕ್ಷಣ ಇಲಾಖೆ ಜ್ಞಾಪನಾ ಪತ್ರ ಹೊರಡಿಸಿರುವುದು ಬೆಳಕಿಗೆ ಬಂದಿದೆ. ಜು.16ರಂದು ಡಿಡಿಪಿಐ ಈ ಜ್ಞಾಪನಾ ಪತ್ರ ಹೊರಡಿಸಿದ್ದು, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ.
ಡಿಡಿಪಿಐ ಹೊರಡಿಸಿದ ಜ್ಞಾಪನಾ ಪತ್ರದಲ್ಲಿ ಏನಿದೆ?:
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮೈದಾನ ಅಥವಾ ಆವರಣವನ್ನು ಯಾವುದೇ ಸಂದರ್ಭದಲ್ಲಿ ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನೂ ನೀಡಬಾರದು. ಅಲ್ಲದೆ ಅನುಮತಿಗಾಗಿ ಡಿಡಿಪಿಐ ಕಚೇರಿಗೂ ಪ್ರಸ್ತಾವನೆ ಸಲ್ಲಿಸಬಾರದು ಎಂದು ಖಡಕ್ ಸೂಚನೆ ನೀಡಲಾಗಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಇನ್ನು ಈ ರೀತಿ ಸುತ್ತೋಲೆ ಹೊರಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬೆಳ್ತಂಗಡಿ ತಾಲ್ಲೂಕು ಶಾಸಕ ಹರೀಶ್(MLA Harish Poonja) ಪೂಂಜ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಸಾಕ್ಷಿ ಆಗಿದೆ. ಜಿಲ್ಲೆಯಲ್ಲಿ ಈ ಹಿಂದೆ ನಡೆಸುತ್ತಿದ್ದಂತೆ ಮುಂದೆಯೂ ನಡೆಸಲಾಗುವುದು. ಅಧಿಕಾರಿಗಳು ಆದೇಶವನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.
Panche: ಪವರ್ಫುಲ್ ಆದ ಪಂಚೆಗೆ ‘ಪಂಚೆ’ ಅನ್ನೋ ಹೆಸರು ಬಂದಿದ್ದು ಹೇಗೆ? ಏನಿದರ ಹಿಸ್ಟರಿ?