Fees Charges: ಈ ಕೋರ್ಸ್‌ಗಳಿಗೆ ಶೇ.10 ರಷ್ಟು ಶುಲ್ಕ ಹೆಚ್ಚಿಸಿ ಶಿಕ್ಷಣ ಇಲಾಖೆ ಆದೇಶ

Fees Charges: ಶಿಕ್ಷಣ ಇಲಾಖೆ ರಾಜ್ಯದಲ್ಲಿ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಿಸಿದ್ದು, ಪ್ರಸಕ್ತ ಸಾಲಿನಿಂದಲೇ ಅನ್ವಯವಾಗುವ ರೀತಿಯಲ್ಲಿ ಶೇ.10 ರಷ್ಟನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಖಾಸಗಿ ಕಾಲೇಜುಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೆ 76,135 ರು. ಅಥವಾ 84,596 ರು. ಶುಲ್ಕ ನಿಗದಿಯಾಗಿದೆ. ಕಾಮೆಡ್‌-ಕೆ ಕೋಟಾದ ಸೀಟುಗಳಿಗೆ 1,86,111 ರು. ಅಥವಾ 2,61,477 ರು. ಪಾವತಿಸಬೇಕು.
ಸರ್ಕಾರಿ ಕಾಲೇಜುಗಳು, ಸರ್ಕಾರಿ ಅನುದಾನಿತ ಕಾಲೇಜುಗಳು, ಮೈಸೂರು ವಿಶ್ವವಿದ್ಯಾಲಯ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಲ್ಲಿ ಶೇ.50 ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಸೀಟುಗಳಿಗೆ 42,116 ರು. ಶುಲ್ಕ ನಿಗದಿ ಪಡಿಸಲಾಗಿದೆ.

ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಇತರೆ ಶುಲ್ಕವಾಗಿ ವಾರ್ಷಿಕ 20,000 ರು. ಮೀರದಂತೆ ಪ್ರಥಮ ವರ್ಷದ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಶೇ10 ರಷ್ಟು ಶುಲ್ಕ ಹೆಚ್ಚಳ ಕುರಿತು ರಾಜ್ಯ ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ ಜೊತೆಗೆ ಒಪ್ಪಂದವಾಗಿತ್ತು. ಇದೀಗ ಉನ್ನತ ಶಿಕ್ಷಣ ಇಲಾಖೆ ಶುಲ್ಕ ನಿಗದಿ ಮಾಡಿ ಆದೇಶ ಮಾಡಿದೆ.

Leave A Reply

Your email address will not be published.