Assembly Session: ಅಂಗನವಾಡಿ ಕಾರ್ಯಕರ್ತರಿಗೆ ಸಂತಸದ ಸುದ್ದಿ- ಗೌರವಧನ ಹೆಚ್ಟಳಕ್ಕೆ ಮುಂದಾದ ಸರ್ಕಾರ !!
Assembly Session: ಅಂಗನವಾಡಿ ಕಾರ್ಯಕರ್ತೆಯರು(Anganavadi Karyakarteyaru) ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
ಹೌದು, ಸದನದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದೂ ಅವರು ಹೇಳಿದ್ದಾರೆ.
ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೆ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ, ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಅಲ್ಲದೆ ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ ಯಾವುದೇ ಸೇವೆಗಳಿಂದ ವಂಚಿತರಾಗದಂತೆ ಕ್ರಮ ವಹಿಸಲಾಗಿದೆ. ಸ್ವಂತ ಕಟ್ಟಡಗಳಿಲ್ಲದ ಪ್ರದೇಶದಲ್ಲಿ ಅಂಗನವಾಡಿಗಳನ್ನು ಬಿಬಿಎಂಪಿ, ಇನ್ನಿತರ ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ; ಕೆಲವೆಡೆ ಉತ್ತಮ ಮೂಲ ಸೌಕರ್ಯವುಳ್ಳ ಬಾಡಿಗೆ ಕಟ್ಟಡಗಳಲ್ಲೂ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಸದನಕ್ಕೆ ತಿಳಿಸಿದರು.