Karnataka Assembly : ಸ್ಪೀಕರ್ ಪೀಠದಲ್ಲಿ ಕುಳಿತು ಮಂಗಳೂರು ಕೈ ನಾಯಕರೊಂದಿಗೆ ಖಾದರ್ ಪೋಟೋಶೂಟ್ – ಇದು ಸಭ್ಯವೇ ಸಭಾಧ್ಯಕ್ಷರೇ ಎಂದು ಸಿಟ್ಟಿಗೆದ್ದ ಜನ !!
Karnataka Assembly: ವಿಧಾನಸಭೆ ಸಭಾಧ್ಯಕ್ಷರ ಪೀಠದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್(U T Khadar) ಅವರು ಕುಳಿತಿರುವಾಗಲೇ ಮಂಗಳೂರು ಕಾಂಗ್ರೆಸ್‌ನ ನಾಯಕರು ಅಲ್ಲಿ ನಿಂತು ಪೋಟೋ ತೆಗೆಸಿಕೊಂಡಿದ್ದು, ಈ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ ವೈರಲ್ ಆಗ್ತಿದೆ. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.
ದ.ಕ. ಜಿಲ್ಲೆಯ(Dakshina Kannada District) ಮುಸ್ಲಿಂ ಸಮುದಾಯದ ಮುಖಂಡ, ಮಾಜಿ ಮೇಯರ್ ಕೆ. ಅಶ್ರಫ್, ಮಂಗಳೂರು ಪಾಲಿಕೆ ಸದಸ್ಯ ನವೀನ್ ಡಿಸೋಜಾ ಮತ್ತಿತರರು ಇತ್ತೀಚೆಗೆ ಬೆಂಗಳೂರು ವಿಧಾನಸೌಧಕ್ಕೆ(Vidhama Soudha) ಭೇಟಿ ನೀಡಿದ್ದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಹಾಗೂ ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ಅವರ ಜೊತೆಗೆ ದ.ಕ. ಜಿಲ್ಲೆಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯಲ್ಲೂ ಇವರು ಭಾಗಿಯಾಗಿದ್ದರು. ಇದೇ ವೇಳೆ ಅಶ್ರಫ್ ಮತ್ತು ನವೀನ್ ಡಿಸೋಜಾ ಸ್ಪೀಕರ್ ಪೀಠದ ಮುಂದೆ ಸ್ಪೀಕರ್ ಜೊತೆಗೆ ಫೋಟೋ ತೆಗೆಸಿಕೊಂಡಿದ್ದಾರೆ. ಕೆ. ಅಶ್ರಫ್ ಅವರು ತಮ್ಮ ವಾಟ್ಸಪ್ ಸ್ಟೇಟಸ್‌ನಲ್ಲೂ ಸ್ಪೀಕರ್ ಜೊತೆಗೆ ಇರುವ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಿವಾದಕ್ಕೂ ಕಾರಣವಾಗಿದೆ.
ಬಿಜೆಪಿ ಹೇಳಿದ್ದೇನು?
ಸ್ಪೀಕರ್ ಹುದ್ದೆ ಅತ್ಯಂತ ಪವಿತ್ರ ಹಾಗೂ ಘನತೆ ಇರುವಂತಹದ್ದು. ಸ್ಪೀಕರ್ ಹುದ್ದೆ ಅಲಂಕರಿಸಿದವರು ರಾಜಕೀಯದಿಂದ ಗಾವುದ ದೂರದಲ್ಲಿರಬೇಕು ಎಂಬುದು ಅಲಿಖಿತ ನಿಯಮ. ಆದರೆ ಸ್ಪೀಕರ್ ಹುದ್ದೆ ಅಲಂಕರಿಸಿರುವ ಯು.ಟಿ. ಖಾದರ್ ಅವರು ಸದನದ ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ತಮ್ಮ ಪೀಠದ ಬಳಿ ತಮ್ಮ ರಾಜಕೀಯ ಆಪ್ತೇಷ್ಟರ ಜೊತೆ ಫೋಟೋಶೂಟ್ ಮಾಡಿಸಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರೇ ತಿಳಿಸಬೇಕು’ ಎಂದು ಬಿಜೆಪಿ ಪ್ರಶ್ನಿಸಿದೆ.