Puneeth Kerehalli: ನಾಯಿಮಾಂಸ ಸಾಗಾಟ ತಡೆಯಲು ಬಂದ ಪುನೀತ್ ಕೆರೆಹಳ್ಳಿ ಬಂಧನ ?, ಇದೀಗ ತೀವ್ರ ಅಸ್ವಸ್ಥ | ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಶಿಫ್ಟ್ !
Puneeth Kerehalli: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ (ಬಿಎನ್ಎಸ್ 132) ಪಡಿಸಿದ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿರುವ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ನಾಯಿ ಮಾಂಸವನ್ನು ರಾಜಸ್ಥಾನದಿಂದ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಪುನೀತ್ ರೈಡ್ ಮಾಡಿದ್ದರು.
ದೂರದ ರಾಜಸ್ಥಾನದಿಂದ ರಾಜ್ಯಕ್ಕೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ನೂರಾರು ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದರು.
ನಂತರ ಪೊಲೀಸ್ ಠಾಣೆಯಲ್ಲಿದ್ದ ಪುನೀತ್ ಅಸ್ವಸ್ಥಗೊಂಡು ಮಲಗಿದ್ದಾರೆ. ಕೂಡಲೇ ಕಾಟನ್ ಪೇಟೆ ಪೊಲೀಸರು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಅಲ್ಲಿ ಠಾಣೆಯಲ್ಲಿ ಸುಸ್ತಾಗಿ ಮಲಗಿದ್ದ ಕೆರೆಹಳ್ಳಿ ಪುನೀತ್ ರನ್ನು ಪೊಲೀಸ್ ಸಿಬ್ಬಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡಿದ್ದಾರೆ. ನಂತರ ಅವರನ್ನು ವ್ಹೀಲ್ ಚೇರ್ ಮೂಲಕ ಕರೆದುಕೊಂಡು ಆಸ್ಪತ್ರೆಗೆ ಹೋಗಿದ್ದಾರೆ.
ಇದೀಗ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4.45 ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಪುನೀತ್ ಕೆರೆಹಳ್ಳಿಯನ್ನು ಕರೆದುಕೊಂಡು ಬಂದಿದ್ದಾರೆ.