Traffic Rules: ಇನ್ಮುಂದೆ 130 ಕಿ ಮೀ ವೇಗದಲ್ಲಿ ವಾಹನ ಓಡಿಸಿದ್ರೆ ಆಗಸ್ಟ್ 1ರಿಂದ ಬೀಳುತ್ತೆ FIR; ಅಲೋಕ್ ಕುಮಾರ್ ಆದೇಶ

Traffic Rules: ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ರಸ್ತೆ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಮಹತ್ವ ಮಾಹಿತಿ (Traffic Rules) ತಿಳಿಸಿದ್ದಾರೆ. ಇನ್ಮುಂದೆ ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿದಲ್ಲಿ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

ಅಲೋಕ್ ಕುಮಾರ್ ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ ಚಾಲನೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಮುಖ್ಯವಾಗಿ ಶೇ. 90 ರಷ್ಟು  ಅಪಘಾತಗಳಿಗೆ ಅತಿ ವೇಗವು ಕಾರಣವಾಗುತ್ತದೆ. ಗುರುವಾರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ, 155 ವಾಹನಗಳು ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸುತ್ತಿದ್ದವು. ಆದ್ದರಿಂದ ಸ್ಪಾಟ್ ಮತ್ತು ಸೆಕ್ಷನಲ್ ಸ್ಪೀಡ್ ದಾಖಲಿಸಲಾಗುತ್ತದೆ ಎಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಓವರ್ ಸ್ಪೀಡಿಂಗ್ ಅನ್ನು ಸಾಮಾನ್ಯವಾಗಿ ಕ್ಯಾಮೆರಾ ಪಾಯಿಂಟ್ ಬಳಿ ಸ್ಪಾಟ್ ಸ್ಪೀಡ್  ಅಳೆಯಲಾಗುತ್ತದೆ. ವಿಭಾಗೀಯ ವೇಗವು ಎರಡು ಕ್ಯಾಮೆರಾ ಬಿಂದುಗಳ ನಡುವಿನ ಸರಾಸರಿ ವೇಗವಾಗಿದೆ. ಬೇರೆಡೆ ವೇಗವಾಗಿ ಓಡಿಸಿ ಕ್ಯಾಮರಾಗಳ ಬಳಿ ಚಾಲಕ ವೇಗ ಕಡಿಮೆ ಮಾಡಿದರೂ ಕೇಸ್ ಬುಕ್ ಆಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಂಟೆಗೆ 105 ಕಿ.ಮೀ ವೇಗದಲ್ಲಿ ಸಂಚರಿಸುವವರಿಗೆ ದಂಡ ವಿಧಿಸಲಾಗುತ್ತದೆ. ಎಫ್‌ಐಆರ್‌ಗಳ ನೋಂದಣಿಗೆ 130 ಕಿಮೀ ಮಿತಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.