Ankola: ಶಿರೂರು ಗುಡ್ಡ ಕುಸಿತ ಪ್ರಕರಣ: ಕಾರ್ಯಾಚರಣೆ ಸ್ಥಗಿತಕ್ಕೆ ಮುಂದಾಯಿತೇ ಜಿಲ್ಲಾಡಳಿತ?

Share the Article

Ankola: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಗುಡ್ಡ ಕುಸಿತ ದುರಂತದ ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಹಾಗೆನೇ ಈ ದುರಂತದಲ್ಲಿ ನಾಪತ್ತೆಯಾಗಿರುವ ಮೂವರ ಪತ್ತೆಗಾಗಿ ಎಸ್ ಡಿಆರ್‌ಎಫ್‌, ಎನ್‌ಡಿಆರ್‌ಎಫ್, ಡೋಣ್, ಹೆಲಿಕಾಪ್ಟರ್, ಮುಳುಗು ತಜ್ಞರು ಸೇರಿ ಕಳೆದ 13 ದಿನಗಳಿಂದ ಶೋಧ ಕಾರ್ಯಚರಣೆ ನಿರಂತರವಾಗಿ ನಡೆಸಿದರೂ ಸಹ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.

ಮಳೆಯ ಕಾರಣ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ನದಿಯೊಳಗೆ ಹೋಗಲು ಸ್ಕೂಬಾ ಡೈ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದ್ಯಕ್ಕೆ ಕಾರ್ಯಚರಣೆ ಸ್ಥಗಿತಗೊಳಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಮುಳುಗು ತಜ್ಞ ಈಶ್ವರ ಮಲ್ಪೆ ಈ ಕಾರ್ಯಾಚರಣೆ ಯಶಸ್ವಿಯಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ನಿರಂತರ ಮಳೆಯ ಕಾರಣ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ನಾನು ನದಿಗೆ ಇಳಿದಾಗ ಬಂಡೆಗಲ್ಲು, ಮಣ್ಣು ಮಾತ್ರವೇ ಕಾಣುತ್ತಿತ್ತು. ನೀರಿನ ವೇಗ ಹೆಚ್ಚಿದೆ. ನದಿ ಒಳಗೆ ಇರಲು ಆಗಲಿಲ್ಲ. ಕೆಸರು ನೀರು ಇರುವ ತನಕ ಕಾರ್ಯಾಚರಣೆ ಮಾಡುವುದು ಕಷ್ಟ. ನದಿ ನೀರು ಕೆಸರುಮಯವಾಗಿರುವುದರಿಂದ ಸರಿಯಾಗಿ ಕಾಣುತ್ತಿಲ್ಲ ಎಂದು ಅವರು ಹೇಳಿದ್ದಾರೆ.

Leave A Reply

Your email address will not be published.