Bengaluru: ಬೆಂಗಳೂರಿಗೆ ನಾಯಿ ಮಾಂಸ ಸಪ್ಲೇ – ಸ್ಪಷ್ಟನೆ ಕೊಟ್ಟು ಆರೋಗ್ಯ ಇಲಾಖೆ ಹೇಳಿದ್ದಿಷ್ಟು!!
Bengaluru: ಬೆಂಗಳೂರು ರೈಲು ನಿಲ್ದಾಣದಲ್ಲಿ ಭಾರೀ ಪ್ರಮಾಣದ ಮಾಂಸ ಸಾಗಾಟ ಪತ್ತೆಯಾಗಿದ್ದು, ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿ ಅವರು ಆರೋಪಿಸಿದ್ದರು. ಇದೀಗ ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪಷ್ಟನೆ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆಯು(Health Department) , ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ. ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಳಕಂಡಂತೆ ಕ್ರಮಗಳನ್ನು ವಹಿಸಲಾಗಿರುತ್ತದೆ ಎಂದು ಹೇಳಿದೆ.
ಅಲ್ಲದೆ ಬೆಂಗಳೂರು(Bengaluru) ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ. ಪರಿಶೀಲನೆ ಸಂಧರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕೆ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ ಎಂದು ಹೇಳಿದೆ.
ಜೊತೆಗೆ ಒಟ್ಟು 90 ಸಂಖ್ಯೆಯ ಪಾರ್ಸೆಲ್‌ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ ಪ್ರಾಣಿಯ ಯಾವ ಪ್ರಾಣಿಯ ಮಾಂಸವೆಂದು ಮಾಂಸವಿರುವುದು ಕಂಡುಬಂದಿರುತ್ತದೆ. ಖಚಿತಪಡಿಸಿಕೊಳ್ಳಲು ಮಾಂಸದ ಮಾದರಿಯನ್ನು ಸಂಗ್ರಹಿಸಿ, ಆಹಾರ ಪುಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ. ವಿಶ್ಲೇಷಣಾ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ. ಪಾರ್ಸೆಲ್‌ಗಳನ್ನು ಕಳುಹಿಸಿದವರ ಮತ್ತು ಸ್ವೀಕರಿಸಿದವರ ಎಫ್‌ಎಸ್‌ಎಸ್‌ಐ ಪರವಾನಗೆ ಸೇರಿಂದತೆ ವಿವರವಾದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮಜರುಗಿಸಲಾಗುವುದು ಎಂಬುದಾಗಿ ತಿಳಿಸಿದೆ.
ಅಂದಹಾಗೆ ರೈಲ್ವೆ ಮೂಲಗಳ ಪ್ರಕಾರ, ಶುಕ್ರವಾರ ರಾತ್ರಿ ರೈಲಿನಲ್ಲಿ ಜೈಪುರದಿಂದ ರಟ್ಟಿನ ಪೆಟ್ಟಿಗೆಗಳಲ್ಲಿ ಲೋಡ್ ಮಾಡಲಾದ ಸುಮಾರು ಮೂರು ಟನ್ ತೂಕದ ಮಾಂಸ ಬೆಂಗಳೂರಿಗೆ ಸಾಗಿಸಲಾಗಿದ್ದು, ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಕೆಲವು ಹಿಂದೂಪರ ಕಾರ್ಯಕರ್ತರು ಅದರಲ್ಲಿ ನಾಯಿ ಮಾಂಸ ಎಂದು ಆರೋಪಿಸಿದ್ದಾರೆ. ಮಾಂಸ ಸಾಗಾಟ ಮಾಡಿದ ಮಾಂಸದ ವ್ಯಾಪಾರಿ ಅಬ್ದುಲ್ ರಜಾಕ್, ಈ ಆರೋಪವನ್ನು ತಳ್ಳಿಹಾಕಿದರು ಮತ್ತು ಇದು ಕುರಿ ಮಾಂಸ ಎಂದು ಹೇಳಿದ್ದಾರೆ.