Nipah Virus: ನಿಫಾ ಸೋಂಕಿತ ರೋಗಿಯ ಆರೈಕೆ ಮಾಡಿದ ನರ್ಸ್: ಜೀವನ್ಮರಣ ಹೋರಾಟದಲ್ಲಿ ಕಡಬದ ಯುವಕ

Nipah Virus: 2023 ರ ಸೆಪ್ಟೆಂಬರ್ ನಲ್ಲಿ ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆಯಲ್ಲಿ ತೊಡಗಿದ್ದ ನರ್ಸ್ ಒಬ್ಬರು ಇದೀಗ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ.

 

ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಎಂಬುವವರೇ ನಿಫಾ ದಾಳಿಗೆ ತುತ್ತಾದವರು.

ಈ ಯುವಕ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.  ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆಯನ್ನು ಇವರು ಸೆಪ್ಟೆಂಬರ್ ತಿಂಗಳು 2023 ರಲ್ಲಿ ಮಾಡಿದ್ದಾರೆ ಎನ್ನಲಾಗಿದೆ.

ಅನಂತರ ಕ್ವಾರಂಟೈನ್ ನಲ್ಲಿದ್ದ  ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿದೆ. ಡಿಸೆಂಬರ್ ನಲ್ಲಿ ಸ್ಕ್ಯಾನಿಂಗ್ ಮಾಡಿದಾಗ, ಮಿದುಳಿನ ಸ್ಟ್ರೋಕ್‌ಗೆ ತುತ್ತಾಗಿರುವುದು ವೈದ್ಯಕೀಯ ತಪಾಸಣೆ ಮೂಲಕ ತಿಳಿದು ಬಂದಿದೆ. ಅನಂತರ ಮರುದಿನವೇ ಕೋಮಾಗೆ ಇವರು ಜಾರಿದ್ದಾರೆ.

ಕಳೆದ ಎಂಟು ತಿಂಗಳಿನಿಂದ ಆಸ್ಪತ್ರೆಯ ಆಡಳಿತ ಮಂಡಳಿಯ ವತಿಯಿಂದಲೇ ಚಿಕಿತ್ಸೆ ನಡೆಯುತ್ತಿದ್ದು, ಆರೋಗ್ಯದಲ್ಲಿ ಯಾವುದೇ ಫಲ ಕಾಣದ ಹಿನ್ನೆಲೆಯಲ್ಲಿ, ಹಾಗೂ ಈಗಾಗಲೇ 40 ಲಕ್ಷ ರೂ.ಗಳಷ್ಟು ಖರ್ಚನ್ನು ಆಡಳಿತ ಮಂಡಳಿ ಭರಿಸಿದ್ದು, ಇನ್ಮುಂದೆ ನಿಭಾಯಿಸುವುದು ಕಷ್ಟ ಎಂದು ಪ್ರತಿಕ್ರಿಯೆ ನೀಡಿದೆ.

ಇದೀಗ ಕುಟುಂಬಸ್ಥರು ಕೇರಳ ಸರಕಾರದ ಮೊರೆ ಹೋಗಿದ್ದಾರೆ.

Leave A Reply

Your email address will not be published.