School Holiday: ಸುರಿಯುತ್ತಿರುವ ಮಹಾ ಮಳೆ; ದ.ಕ.‌, ಉಡುಪಿ ಜಿಲ್ಲೆಯಾದ್ಯಂತ ನಾಳೆ (ಆಗಸ್ಟ್‌1) ಶಾಲಾ, ಕಾಲೇಜಿಗೆ ರಜೆ

Share the Article

School Holiday: ಕರಾವಳಿ ಜಿಲ್ಲೆಯಾದ್ಯಂತ ನಿರಂತರವಾಗಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್.1) ದ.ಕ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೂಡ ಧಾರಾಕಾರ ಮಳೆ ಸುರಿಯುತ್ತಿದ್ದು ನಾಳೆ (ಆಗಸ್ಟ್‌ 1) ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಆ. 1ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿರುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Leave A Reply