Mangalore University Recruitment 2024: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ! ಈ ರೀತಿ ಅರ್ಜಿ ಸಲ್ಲಿಸಿ

Mangalore University Recruitment 2024: ಉಪನ್ಯಾಸಕರ ವೃತ್ತಿಯಲ್ಲಿ ಆಸಕ್ತಿ ಮತ್ತು ಅರ್ಹತೆ ಇರುವವರಿಗೆ ಸುವರ್ಣ ಅವಕಾಶ ಇಲ್ಲಿದೆ. 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದ (Mangalore University Recruitment 2024) ಘಟಕ ಕಾಲೇಜುಗಳಲ್ಲಿ ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತಿ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಭೂಗೋಳಶಾಸ್ತ್ರ, ದೈಹಿಕ ಶಿಕ್ಷಣ, ಫಿಸಿಕ್ಸ್‌, ಕೆಮಿಸ್ಟ್ರಿ, ಮೈಕ್ರೋಲಜಿ, ಗಣಿತ, ಕಂಪ್ಯೂಟರ್ ಸೈನ್ಸ್‌ ಮತ್ತು ಬಿಸಿಎ, ಬಾಟನಿ, ಜುವಾಲಜಿ, ಕಾಮರ್ಸ್‌, ಬಿಬಿಎ ವಿಷಯಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಎಂಪ್ಲಾಯ್‌ಮೆಂಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ.

ಮುಖ್ಯವಾಗಿ ವಿಶ್ವವಿದ್ಯಾಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾಲಯ ಸಂಧ್ಯಾ ಕಾಲೇಜು, ಮಂಗಳೂರು / ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜು, ಮಂಗಳಗಂಗೋತ್ರಿ / ವಿವಿ ಕಾಲೇಜು, ನಾಲ್ವಡಿ ಮತ್ತು ವಿವಿ ಕಾಲೇಜು, ಬನ್ನಡ್ಕ, ಮೂಡಬಿದಿರೆ, ಇಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಮೇಲಿನ ಪದವಿ ಘಟಕದಲ್ಲಿ ಖಾಲಿ ಇರುವ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ / ಅರೆಕಾಲಿಕ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ.55 ಅಂಕ ಹೊಂದಿರುವ ( ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡ.50 ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ faculty.mangaloreuniversity.in ರಲ್ಲಿ ಅಂತಿಮ ದಿನಾಂಕದೊಳಗಾಗಿ ಸಲ್ಲಿಸುವುದು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:

ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

ಸ್ನಾತಕ ಮತ್ತು ಸ್ನಾತಕೋತ್ತರ ಅಂಕಪಟ್ಟಿಗಳು ಹಾಗೂ ಪದವಿ ಪ್ರಮಾಣ ಪತ್ರಗಳು

ಯುಜಿಸಿ / ಎನ್‌ಇಟಿ/ ಎಸ್‌ಎಲ್‌ಇಟಿ ಉತ್ತೀರ್ಣತೆ / ಪಿಹೆಚ್‌ಡಿ / ಎಂ.ಫಿಲ್ ಪದವಿ ಪ್ರಮಾಣ ಪತ್ರಗಳು

ಸಂಶೋಧನಾ ಪತ್ರಿಕೆಗಳು.

ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಯುಜಿಸಿ ನಿಗದಿಪಡಿಸಿದ ಮಾನದಂಡ ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶನುಸಾರ ಮಾಡಲಾಗುವುದು.

ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.

ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿವಿ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಈ ಕುರಿತು ವಿವಿ ತೀರ್ಮಾನವೇ ಅಂತಿಮವಾಗಿರುತ್ತದೆ.

ಸಂದರ್ಶನ ದಿನಾಂಕವನ್ನು ಮುಂದಿನ ದಿನಗಳಲ್ಲಿ ವಿವಿಯ ಅಧಿಕೃತ ವೆಬ್‌ಸೈಟ್‌ www.mangaloreuniversity.ac.in ನಲ್ಲಿ ಪ್ರಕಟಿಸಲಾಗುವುದು.

ನೇಮಕಾತಿ ವಿಧಾನಗಳು

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ಅರ್ಜಿ ಶುಲ್ಕ ವಿವರ:

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100.

ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200.

ಪ್ರಮುಖ ದಿನಾಂಕಗಳು:

ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: 25-07-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-08-2025

Leave A Reply

Your email address will not be published.