Mangaluru: ಮಳೆಗಾಲದಲ್ಲಿ ಕಟ್ಟಡ ನಿರ್ಮಾಣ ಅಗೆತಕ್ಕೆ ಬಿತ್ತು ಬ್ರೇಕ್, ಜಿಲ್ಲಾ ಉಸ್ತುವಾರಿ ದಿನೇಶ್ ಆರ್. ಗುಂಡೂರಾವ್‌ ಖಡಕ್ ಸೂಚನೆ

Mangaluru: ಮಳೆಗಾಲದಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ. ಮಳೆಗಾಲದಲ್ಲಿ ಭೂಮಿ ಅಗೆಯುವುದರಿಂದ ಭೂಕುಸಿತ ಉಂಟಾಗುವ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ಆ ಕೆಲಸಗಳನ್ನು ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಆರ್. ಗುಂಡೂರಾವ್‌ ಸೂಚಿಸಿದ್ದಾರೆ.

ಸಚಿವ ದಿನೇಶ್ ಆರ್. ಗುಂಡೂರಾವ್‌ ರವರು ನಾಳೆ ಶುಕ್ರವಾರ ಜಿಲ್ಲೆಯಲ್ಲಿ ಮಳೆ ಹಾನಿಗೆ ಒಳಗಾದ ಹಾಗೂ ಭೂ ಕುಸಿತ ಉಂಟಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮಳೆಗಾಲದಲ್ಲಿ ಭೂಮಿಗಳನ್ನು ಆಗೆಯುವುದರಿಂದ ಸಾರ್ವಜನಿಕ ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಇದ್ದು, ಅದರಿಂದ ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು .ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್‌ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.

ಇಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಓ ಡಾ. ಆನಂದ್ ಮತ್ತಿತರರು ಇದ್ದರು.

Leave A Reply

Your email address will not be published.