Wayanad Landslide: ವಯನಾಡಿನಲ್ಲಿ ಕುಸಿದದ್ದು ಬರೊಬ್ಬರಿ 21 ಎಕರೆಯ ಗುಡ್ಡ, ಕೊಚ್ಟಿ ಹೋಗಿದ್ದು 4 ಗ್ರಾಮ !! ರಣಭೀಕರ ಚಿತ್ರ ಬಿಡುಗಡೆ

Wayanad Landslide: ಕನಿಷ್ಠ ಎಂದರೂ ಸುಮಾರು 300 ಮಂದಿಯ ಅಧಿಕ ಸಾವಿಗೆ ಕಾರಣವಾಗಿ ಇಡೀ ದೇಶವನ್ನೇ ತಲ್ಲಣಗೊಳಿಸಿದ ಕೇರಳದ ವಯನಾಡು ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಈ ಕುಸಿತ ಹೇಗಾಯಿತು ಎಂದು ವಿವರಿಸಿದೆ. ಇದು ನೋಡುಗರನ್ನು ಬೆಚ್ಚಿಬೀಳಿಸುತ್ತದೆ.

ಹೌದು, ವಯನಾಡಿನ( Wayanad Landslide) ಭೂಕುಸಿತ ಹೇಗಾಯಿತು ಎಂಬುದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪತ್ತೆ ಹಚ್ಚಿದೆ ಹಾಗೂ ಈ ಕುರಿತಾದ ಹೈ-ರೆಸಲ್ಯೂಷನ್‌ ಉಪಗ್ರಹ ಚಿತ್ರಗಳನ್ನು ಪ್ರಕಟಿಸಿದೆ. ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ(21 ಪ್ರದೇಶಕ್ಕೆ) ಪ್ರದೇಶಕ್ಕೆ ಹಾನಿ ವ್ಯಾಪಿಸಿದ್ದು, ಹೀಗಾಗಿ ಇಷ್ಟೂ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಇಸ್ರೋ ಅಭಿಪ್ರಾಯಪಟ್ಟಿದೆ.

ಅಲ್ಲದೆ ಈ ಗುಡ್ಡದ ಅವಶೇಷವು ಸಮೀಪದ ಇರುವೈಪುಳ ನದಿಯಲ್ಲಿ 8 ಕಿ.ಮೀ.ನಷ್ಟು ದೂರ ತೇಲಿಕೊಂಡು ಹೋಗಿದೆ. ಇದರಿಂದಾಗಿ ನದಿ ಅಕ್ಕಪಕ್ಕದ ಇಳಿಜಾರು ಪ್ರದೇಶದ 4 ಗ್ರಾಮಗಳು ನಾಮಾವಶೇಷವಾದವು ಎಂದು ಗೊತ್ತಾಗಿದೆ. ಇಸ್ರೋ ಗುರುವಾರ 2 ಉಪಗ್ರಹ ಚಿತ್ರ ಪ್ರಕಟಿಸಿದೆ. ಮೊದಲನೆಯ ಚಿತ್ರದಲ್ಲಿ ಈ ಹಿಂದೊಮ್ಮೆ ಸಂಭವಿಸಿದ ಭೂಕುಸಿತದ ದೃಶ್ಯವಿದೆ. ಈಗ ಉಂಟಾದ ಭೂಕುಸಿತದ ಸ್ಥಳದಲ್ಲೇ ಹಿಂದೆಯೂ ಈಗಿನಷ್ಟು ಅಲ್ಲದಿದ್ದರೂ ತಕ್ಕಮಟ್ಟಿಗೆ ಭೂಕುಸಿತ ಆಗಿತ್ತು. ಅರ್ಥಾತ್‌ ಈ ಸ್ಥಳವು ಭೂಕುಸಿತದ ಅಪಾಯವನ್ನು ತನ್ನೊಡಲಿನಲ್ಲೇ ಇರಿಸಿಕೊಂಡಿತ್ತು ಮತ್ತು ಈ ಭಾಗದ ಜನರು ಅದನ್ನು ನಿರ್ಲಕ್ಷಿಸಿ ಇಲ್ಲೇ ವಾಸವಾಗಿದ್ದರು ಎಂಬುದನ್ನು ತೋರಿಸುತ್ತದೆ.

Leave A Reply

Your email address will not be published.