Gruhalakshmi: ಯಜಮಾನಿಯರಿಗೆ ಸಿಹಿ ಸುದ್ದಿ – ಮೊದಲು ಈ ಜಿಲ್ಲೆಯ ಮಹಿಳೆಯರಿಗೆ ಬರಲಿದೆ ಗೃಹಲಕ್ಷ್ಮೀ ಹಣ !!
Gruhalakshmi : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಪ್ರಮುಖವಾಗಿರುವ ಯೋಜನೆ ‘ಗೃಹಲಕ್ಷ್ಮಿ ಯೋಜನೆ'(Gruhalakshmi Scheme). ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಹಣ ಜಮೆಯಾಗುತ್ತಿದೆ. ಆದರೆ ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಯಾವ ಯಜಮಾನಿಯರ ಖಾತೆಗೂ ಹಣ ಜಮಾ ಆಗಿಲ್ಲ. ಈ ಬೆನ್ನಲ್ಲೇ ಸರ್ಕಾರವು ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ತಿಂಗಳ ಮೊದಲ ವಾರವೇ ಜೂನ್, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದೆ. ಆದರೆ ಮೊದಲು ಈ ಜಿಲ್ಲೆಯ ಯಜಮಾನಿಯರಿಗೆ ಹಣ ಜಮಾ ಆಗಲಿದೆ ಎನ್ನಲಾಗಿದೆ.
ಹೌದು, ಆಗಸ್ಟ್ 6 ರ ನಾಳೆ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಉಳಿದ ಜಿಲ್ಲೆಗಳಿಗೆ ಆಗಸ್ಟ್ 6 ರಂದು ಹಣ ಬಿಡುಗಡೆ ಆಗಲಿದೆ ಎನ್ನಲಾಗಿದೆ.