Kichcha Sudeep: ಗೌರವ ಡಾಕ್ಟರೇಟ್ ನಿರಾಕರಿಸಿದ ಖ್ಯಾತ ನಟ ಕಿಚ್ಚ ಸುದೀಪ್! ಡಾಕ್ಟರೇಟ್ ನಿರಾಕರಿಸಲು ಕೊಟ್ಟ ಕಾರಣವೇನು ಗೊತ್ತಾ?

Kichcha Sudeep:  ಕನ್ನಡದ ಮಾಣಿಕ್ಯ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Kiccha Sudeep) ಕನ್ನಡ ಚಿತ್ರರಂಗ ಕ್ಷೇತ್ರಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಸುದೀಪ್ ಅವರು 40ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿರುವಂತಹ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Kiccha Sudeep) ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಪರಭಾಷೆಗಳಲ್ಲಿ ಕೂಡ ನಾಯಕನಟನಾಗಿ ಹಾಗೂ ಪ್ರಮುಖ ಕಲಾವಿದನಾಗಿ ಕಾಣಿಸಿಕೊಂಡು ದೊಡ್ಡ ಅಭಿಮಾನಿ ಬಳಗವೇ ಇದೆ.

ಇದರ ಜೊತೆಗೆ ಅವರು ಸಾಕಷ್ಟು ಸಮಾಜಮುಖಿ ಕೆಲಸವನ್ನು ಕೂಡ ಮಾಡುತ್ತಿದ್ದಾರೆ. ಈ ಎಲ್ಲಾ ಆಧಾರದ ಮೇಲೆ ಕಿಚ್ಚ ಸುದೀಪ್​ಗೆ ಗೌರವ ಡಾಕ್ಟರೇಟ್ ನೀಡಲು ತುಮಕೂರು ವಿವಿ ನಿರ್ಧರಿಸಿತ್ತು. ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಸುದೀಪ್ ಗಮನಕ್ಕೆ ತರಲಾಗಿತ್ತು.ಆದರೆ, ಇದನ್ನು ಸುದೀಪ್ ಅವರು ನಿರಕಾರಿಸಿದ್ದಾರೆ.

ಹೌದು, ಸುದೀಪ್ ಅವರ ಒಳ್ಳೆಯ ಕೆಲಸವನ್ನು ಗಮನಿಸಿ ತುಮಕೂರು ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ, ಇದನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಮಾದರಿ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕಿಚ್ಚ ಸುದೀಪ್​ಗೆ ಗೌರವ ಡಾಕ್ಟರೇಟ್ ನೀಡಲು ತುಮಕೂರು ವಿವಿ ನಿರ್ಧಾರಕ್ಕೆ ಹೃದಯಪೂರ್ವಕ ಧನ್ಯವಾದ ತಿಳಿಸಿರುವ ಸುದೀಪ್ ಅವರು, ಇದನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ‘ಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಹಿರಿಯರು ಇದ್ದಾರೆ. ಅವರಿಗೆ ಡಾಕ್ಟರೇಟ್ ನೀಡಿ’ ಎಂದು ಸುದೀಪ್ ಕೋರಿದ್ದಾರೆ.

ಸದ್ಯ ಆಗಸ್ಟ್ 17ರಂದು ತುಮಕೂರು ವಿವಿ ಆವರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಾಕ್ಟರೇಟ್​ ಪ್ರಧಾನ ಮಾಡಲಿದ್ದು, ಈ ಬಾರಿ ತುಮಕೂರು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಜಲಕ್ರೀಡಾ ಸಾಹಸಿಗ ಮತ್ತು‌ ಸಾಮಾಜಿಕ ಕಾರ್ಯಕರ್ತ ಸಿ.ಎಸ್. ನಾಗಾನಂದನ ಸ್ವಾಮಿ, ಕೈಗಾರಿಕೋದ್ಯಮಿ ಎಚ್. ಜಿ‌.ಚಂದ್ರಶೇಖರ್, ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.

Leave A Reply

Your email address will not be published.