Bangladesh Hindu temples: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ : ಹಿಂದೂ ದೇವಸ್ಥಾನಗಳ ಮೇಲೆ ದಾಳಿ : ಭಾರತೀಯ ಸಾಂಸ್ಕೃತಿಕ ಕೇಂದ್ರ ಧ್ವಂಸ

Bangladesh Hindu temples: ಬಾಂಗ್ಲಾದೇಶದ ಪ್ರಧಾನಿ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ನಿನ್ನೆ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಬಾಂಗ್ಲಾದಿಂದ ಸೋಮವಾರ ಸಂಜೆ ದೆಹಲಿಯಿಂದ 30 ಕಿ.ಮೀ ದೂರದಲ್ಲಿರುವ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್‌ ವಾಯುನೆಲೆಗೆ ತಲುಪಿದ್ದಾರೆ. ಇದೀಗ ಅವರ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಅಲ್ಲಿನ ನಾಗರೀಕರು ಬಾಂಗ್ಲಾದೇಶದಲ್ಲಿರುವ (Bangladesh) ಹಿಂದೂ ದೇವಾಲಯಗಳ (Hindu Temple) ಮೇಲೆ ದಾಳಿ ನಡೆಸಿದ್ದಾರೆ. ಅವರ ವಿಕೃತಿ ಇನ್ನು ವಿಕೋಪಕ್ಕೆ ಹೋಗಿ ಅಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು (Indian Cultural Centre) ನಾಶಗೊಳಿಸಿದ್ದಾರೆ.

ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ಮೇಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಭಾರಿ ಹಿಂಸಾಚಾರ ನಡೆದಿದೆ. ಇದರಿಂದ ಕೆಲವು ಹಿಂದೂ ಸಮಾಜದ ಮುಖಂಡರು ಭಯಗೊಂಡಿದ್ದಾರೆ. ಘಟನೆ ಬಗ್ಗೆ ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಮುಖಂಡೆ ಕಾಜೋಲ್ ದೇಬನಾಥ್ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಾಕಾರ ಢಾಕಾದ ಧನ್ಮಂಡಿ ಪ್ರದೇಶದಲ್ಲಿ ಇದ್ದ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರ ಕೂಡ ಪುಂಡರ ದಾಳಿಗೆ ಧ್ವಂಸವಾಗಿದೆ ಎನ್ನಲಾಗುತ್ತಿದೆ.

ಪ್ರತಿಭಟನಾ ನಿರತರು ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಬಂಗಬಂಧು ಮೆಮೋರಿಯಲ್ ಮ್ಯೂಸಿಯಂ ಸೇರಿದಂತೆ ಢಾಕಾದ ಹಲವು ಮುಖ್ಯ ಸ್ಥಳಗಳಿಗೆ ಬೆಂಕಿ ಹಚ್ಚಿರುವ ಬಗ್ಗೆ ವರದಿಯಾಗಿದೆ. ಬಾಂಗ್ಲಾ ವಿಮೋಚನೆ ನಂತರ 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹಸೀನ ತಂದೆ ಹತ್ಯೆಗೀಡಾಗಿದ್ದರು. ಅವರಿಗಾಗಿ ವಸ್ತುಸಂಗ್ರಹಾಲಯವನ್ನು ಸಮರ್ಪಿಸಲಾಗಿತ್ತು.

ಬಾಂಗ್ಲಾದಲ್ಲಿ ಹಿಂಸಾಚಾರ ನಡೆಯಲು ಕಾರಣ ಏನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಸರ್ಕಾರಿ ಉದ್ಯೋಗಗಳಲ್ಲಿ 56% ಕೋಟಾ ವ್ಯವಸ್ಥೆ ಜಾರಿಯಲ್ಲಿದೆ. ಇದರಲ್ಲಿ 1971ರ ವಿಮೋಚನಾಕ್ಕಾಗಿ ಹೋರಾಡಿದ ಕುಟುಂಬಕ್ಕೆ ಶೇ.30, ಇನ್ನು ಹಿಂದುಳಿದ ಜಿಲ್ಲೆಗಳ ನಾಗರೀಕರಿಗೆ ಶೇ.10, ಮಹಿಳೆ ಕೋಟಾದಲ್ಲಿ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ನೀಡಲಾಗಿದೆ. ಇನ್ನುಳಿದಂತೆ ಅಂಗವಿಕಲರಿಗೆ ಶೇ.1 ಮೀಸಲಾತಿ ನೀಡಲಾಗಿದೆ. ವಿಮೋಚನಾ ಹೋರಾಟಗಾರರ ಕುಟುಂಬಸ್ಥರಿಗೆ ನೀಡಿರುವ ಶೇ.30 ಮೀಸಲಾತಿಯನ್ನು ರದ್ದು ಪಡಿಸಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹ.

ಆದರೆ ಈ ಬೇಡಿಕೆಗೆ ಪ್ರಧಾನಿ ಶೇಕ್‌ ಹಸೀನಾ ಒಪ್ಪಿಗೆ ಸೂಚಿಸಿರಲಿಲ್ಲ. ಇದರಿಂದ ಕೋಪಗೊಂಡ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಸಾಚಾರಕ್ಕೆ ತಿರುಗಿಸಿದ್ದರು. ಇದಕ್ಕೆ ಮುಖ್ಯವಾಗಿ ಪ್ರತಿಭಟನೆಗೆ ಇಳಿದವರು ವಿದ್ಯಾರ್ಥಿಗಳು. ಇವರ ಬೆಂಬಲಕ್ಕೆ ಸೇನೆ, ವಿಪಕ್ಷಗಳಿಂದಲೂ ಸಂಪೂರ್ಣ ಬೆಂಬಲ ವ್ಯಕ್ತವಾಗಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಶೇಖ್‌ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತದ ಹಿಂಡನ್‌ ವಾಯುನೆಲೆಗೆ ಬಂದಿಳಿದಿದ್ದಾರೆ.

Leave A Reply

Your email address will not be published.