Bangladesh: ಬಾಂಗ್ಲಾ ಹಿಂಸಾಚಾರದ ಹಿಂದಿದೆಯಾ ಉಗ್ರರ ಕೈವಾಡ ? ಹಸೀನಾ ಮಗನಿಂದಲೇ ಸ್ಫೋಟಕ ಹೇಳಿಕೆ !!
Bangladesh: ಬಾಂಗ್ಲಾದೇಶ ಹಿಂಸಾಚಾರ ಅತಿರೇಕವಾಗಿದ್ದು, ದೇಶದ ಪ್ರಧಾನಿಯನ್ನೇ ರಾಜಿನಾಮೆ ಕೊಟ್ಟು ಪಲಾಯನ ಮಾಡಿಸಿದೆ. ಈ ಬೆನ್ನಲ್ಲೇ ದೇಶದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಇದರ ನಡುವೆ ಬಾಂಗ್ಲಾದಲ್ಲಿ ನಡೆದ ಹಿಂಸಾಚಾರದ ಹಿಂದೆ ಉಗ್ರರ ಕೈವಾಡ ಇದೆ ಎಂದು ಮಾಜಿ ಪ್ರಧಾನಿ ಹಸೀನಾ ಶೇಖ್(Sheikh Hasina) ಪುತ್ರ ಸಾಜಿಬ್ ವಾಜಿದ್(Sajib Vajid) ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದಾರೆ.
ಅಲ್ಲದೆ ಅವರು ನಮ್ಮ ತಾಯಿ ಹಸೀನಾ ಶೇಖ್ ದೇಶವನ್ನು ತೊರೆದಿದ್ದಾರೆ. ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಮತ್ತೆ ಯಾವತ್ತೂ ಕೂಡ ರಾಜಕೀಯಕ್ಕೆ ಬರುವುದಿಲ್ಲ. ಸುರಕ್ಷತೆ ದೃಷ್ಟಿಯಿಂದ ನಮ್ಮ ತಾಯಿ ದೇಶವನ್ನು ತೊರೆದಿದ್ದಾರೆ ಎಂದು ಸಾಜಿಬ್ ವಾಜಿದ್ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದಲ್ಲಿ ಹಿಂಸಾಚಾರಕ್ಕೆ ಕಾರಣ ಏನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.