Paris Olympics: ಭಗ್ನಗೊಂಡ ಒಲಂಪಿಕ್ ನ ‘ಬೆಳ್ಳಿ’ ಕನಸು – ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ CAS !!
Paris Olympics: ಪ್ಯಾರಿಸ್ ಒಲಿಂಪಿಕ್ ನಲ್ಲಿ ಭಾರತಕ್ಕೆ ಭಾರೀ ಹಿನ್ನಡೆಯಾಗಿದ್ದು ಮಹಿಳೆಯರ 50 ಕೆಜಿ ಕುಸ್ತಿ ಫೈನಲ್ ಪಂದ್ಯದಿಂದ ಅನರ್ಹಗೊಳಿಸಿದ ಒಲಿಂಪಿಕ್ ಸಮಿತಿ ನಿರ್ಧಾರ ಪ್ರಶ್ನಿಸಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ವಿನೇಶ್ ಫೋಗಟ್(Vinesh Phogat) ಸಲ್ಲಿಸಿದ್ದ ಅರ್ಜಿಯ ವಜಾಗೊಂಡಿದೆ. ಈ ಮೂಲಕ ಬೆಳ್ಳಿಯ ಆಸೆ ಕಮರಿದೆ.
ಹೌದು, ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಇದೀಗ ಅರ್ಜಿಯನ್ನು ವಜಾ ಮಾಡಿದೆ. ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರವನ್ನು ಆಗಸ್ಟ್ 16ಕ್ಕೆ ಮುಂದೂಡಿತ್ತು. ಆದರೆ ಇಂದು ದಿಢೀರ್ ನಿರ್ಧಾರ ಪ್ರಕಟಿಸಿದ CAS ಅರ್ಜಿಯನ್ನು ವಜಾಗೊಳಿಸಿರುವುದಾಗಿ ಹೇಳಿದೆ. ಇದರರ್ಥ ಈಗ ಅವರು ಬೆಳ್ಳಿ ಪದಕವನ್ನು ಪಡೆಯುವುದಿಲ್ಲ.
ಅಂದಹಾಗೆ ವಿನೇಶ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಾತ್ರವಲ್ಲ. ಈ ಹಿಂದೆಯೂ ಎರಡು ಬಾರಿ ಆಘಾತ ಎದುರಾಗಿತ್ತು. ವಿನೇಶ್ ಅವರು 2016ರ ರಿಯೋ ಗೇಮ್ಸ್‌ನಲ್ಲಿ ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ್ದರು. 2016ರ ರಿಯೊ ಒಲಿಂಪಿಕ್ಸ್‌ನ ಕ್ವಾರ್ಟರ್-ಫೈನಲ್‌ನಲ್ಲಿ ಮೊಣಕಾಲಿನ ಗಾಯದಿಂದಾಗಿ ಅವರ ಪದಕದ ನಿರೀಕ್ಷೆಯು ಭಗ್ನಗೊಂಡಿತು. ಇದರ ನಂತರ, ಅವರು 2020ರಲ್ಲಿ ಟೋಕಿಯೊ ಒಲಿಂಪಿಕ್ಸ್ ನ ಕ್ವಾರ್ಟರ್- ಫೈನಲ್‌ನಲ್ಲಿ 53 ಕೆಜಿ ವಿಭಾಗದಲ್ಲಿ ಸೋತಿದ್ದರು. ಈಗ 2024ರಲ್ಲಿ ಅವರು ಅಧಿಕ ತೂಕದ ಕಾರಣದಿಂದ ಹೊರಬಿದಿದ್ದರು.
I’m truly enjoying the design and layout of your blog. It’s a very easy on the eyes which makes it much more enjoyable for me to come here and visit more often. Did you hire out a developer to create your theme? Great work!