Congress Guarantees: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಮುಂದುವರಿಯುತ್ತವೆಯೇ ?! ಸಿದ್ದರಾಮಯ್ಯ ಮಹತ್ವದ ಹೇಳಿಕೆ

Congress Guarantees: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ (Congress Guarantees) ಖಜಾನೆ ಖಾಲಿಯಾಗಿದೆ. ಹೀಗಾಗಿ ಸದ್ಯದಲ್ಲೇ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎನ್ನಲಾಗುತ್ತಿದೆ. ಆದರೀಗ ಈ ಬಗ್ಗೆ ಸಿದ್ದರಾಮಯ್ಯ ಅವರು ಬಿಗ್ ಅಪ್ಡೇಟ್ ನೀಡಿದ್ದು ನಿರಂತರವಾಗಿ ಗ್ಯಾರಂಟಿ (Congress Guarantee) ಯೋಜನೆಗಳು ಮುಂದುವರಿಯುತ್ತವೆ ಎಂದು ಭಭರವಸೆ ನೀಡಿದ್ದಾರೆ.

 

ಹೌದು, 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಾಗುತ್ತದೆ ಎಂಬ ಸುದ್ದಿಗಳನ್ನು ಅಲ್ಲಗಳೆದರು.

ಅಂದಹಾಗೆ ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಖುದ್ದು ಸಚಿವರೇ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ. ಅಲ್ಲದೆ ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಹೈಕಮಾಂಡ್‌ನ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಈ ಕುರಿತು ಚರ್ಚಿಸಿದ್ದಾರೆ.

Leave A Reply

Your email address will not be published.