Heavy Rain: ಇಂದು, ನಾಳೆ ಎರಡು ದಿನ ರಾಜ್ಯದೆಲ್ಲೆಡೆ ಮಳೆಯ ಮುನ್ಸೂಚನೆ: ಎಲ್ಲೆಲ್ಲಾ ಮಳೆಯಾಗಲಿದೆ..?

Heavy Rain: ಕಳೆದ ಒಂದು ವಾರದ ಹಿಂದೆ ವರುಣ ಭರ್ಜರಿಯಾಗಿ ಅಬ್ಬರಿಸಿ ಬೊಬ್ಬಿರುದು ಶಾಂತನಾಗಿದ್ದ. ಮಲೆನಾಡು, ಕರಾವಳಿ ಸೇರಿದಂತೆ ಮಳೆ ನಿಂತು ಸೂರ್ಯನ ಪ್ರಕಾಶ ಹೆಚ್ಚಾಗಿ ಬಿಸಿ ವಾತಾವರಣ ಇತ್ತು. ಆದರೆ ನಿನ್ನೆಯಿಂದ ಮತ್ತೆ ಮಳೆ ಆರಂಭವಾಗಿದೆ. ಬೆಳ್ತಂಗಡಿ ತಾಲೂಕಿನ ಕೊಲ್ಲಿ, ನೆರಿಯಾ, ದಿಡುಪೆ ಸುತ್ತ ಮುತ್ತ ನಿನ್ನೆ ಬಾರಿ ಪ್ರಮಾಣದ ಮಳೆಯಾಗಿದ್ದು, ಕೃಷಿ ಜಮೀನು, ಮನೆಯಂಗಳದವರೆ ನೀರು ಬಂದಿದೆ. ನದಿಗಳು ಉಕ್ಕಿ ಹರಿದಿರುವ ಬಗ್ಗೆ ವರದಿಯಾಗಿದೆ. ಇದೀಗ ಮಳೆ ಇಂದು ನಾಳೆ ರಾಜ್ಯದೆಲ್ಲೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಇಂದು ಭಾರಿ ಮಳೆ (Heavy Rain) ಬೀಳುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಹಾಕಲಾಗಿದೆ. ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಹೇಳಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ವರ್ಷಧಾರೆಯ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಆರೆಂಜ್ ಅಲರ್ಟ್ ಅನ್ನು ನಾಲ್ಕು ಜಿಲ್ಲೆಗಳಲ್ಲಿಂದು ಘೋಷಿಸಿದೆ. ಕೆಲವು ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಆಗಷ್ಟ್ 22ರಿಂದ ಆಗಷ್ಟ್ 24ರವರೆಗೆ ಮಳೆ ಕೊಂಚ ವಿರಾಮ ನೀಡಲಿದ್ದು, ಮತ್ತೆ 25ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆರಂಭವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.