HDK Challenge: ಸಿದ್ದರಾಮಯ್ಯಗೆ H.D.ಕುಮಾರಸ್ವಾಮಿ ಚಾಲೆಂಜ್: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು

HDK Challenge: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು.

 

ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟರು ಕೇಂದ್ರ ಸಚಿವರು. ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ವಾಗ್ದಾಳಿ ನಡೆಸಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಮೇಲಿನಂತೆ ಹೇಳಿಕೆ ನೀಡಿದ್ದರು. ಇದಕ್ಕೆ ಖಾರವಾಗಿ ತಿರುಗೇಟು ಕೊಟ್ಟ ಸಚಿವರು, ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ ಎಂದು ಹೇಳಿದರು.

1 Comment
  1. Business dicker says

    Business dicker very informative articles or reviews at this time.

Leave A Reply

Your email address will not be published.