Uttar Pradesh: ಭ್ರಷ್ಟಾಚಾರ ವಿರುದ್ಧ ಸರ್ಕಾರದ ಸಮರ – 13 ಲಕ್ಷ ಸರ್ಕಾರಿ ನೌಕರರ ಆಗಸ್ಟ್ ಸಂಬಳ ಕಟ್ !!

Uttar Pradesh: ಭ್ರಷ್ಟಾಚಾರ ವಿರುದ್ಧ ಸಮರ ಸಾರಲು ಮುಂದಾಗಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯ ನಾಥ್ ಸರ್ಕಾರ ತನ್ನ ಸರ್ಕಾರಿ ನೌಕರರಿಗೆ ಬಿಸಿ ಮುಟ್ಟಿಸಲು ತಯಾರಿ ನಡೆಸಿದೆ. ಹೀಗಾಗಿ ತನ್ನ ರಾಜ್ಯದ 13 ಲಕ್ಷ ಸರ್ಕಾರಿ ನೌಕರರ ಆಗಸ್ಟ್ ತಿಂಗಳ ಸಂಬಳ ಕಟ್ ಮಾಡಲು ಸಿದ್ಧತೆ ನಡೆಸಿದೆ.

 

ಹೌದು, ಉತ್ತರ ಪ್ರದೇಶ (Uttara Pradesh) ಸರ್ಕಾರದ 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಆಗಸ್ಟ್‌ ತಿಂಗಳ ವೇತನ (August Salary) ಪಾವತಿಯಾಗುವುದು ಅನುಮಾನವಾಗಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.

ಸರ್ಕಾರ ಹೇಳಿದ್ದೇನು?
ಭ್ರಷ್ಟಾಚಾರದ (Corruption) ವಿರುದ್ಧ ಸಮರ ಸಾರಿರುವ ಸರ್ಕಾರ ಎಲ್ಲಾ ಸರ್ಕಾರಿ ಉದ್ಯೋಗಿಗಳು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಮಾನವ ಸಂಪದಾ ಪೋರ್ಟಲ್‌ನಲ್ಲಿ ಸಲ್ಲಿಸಬೇಕೆಂದು ಸೂಚಿಸಿದೆ. ಉದ್ಯೋಗಿಗಳು ಆಗಸ್ಟ್ 31 ರೊಳಗೆ ತಮ್ಮ ಆಸ್ತಿಯ ವಿವರವನ್ನು ಘೋಷಿಸಬೇಕು. ಒಂದು ವೇಳೆ ಘೋಷಿಸದೇ ತಿಂಗಳ ಸಂಬಳವನ್ನು ಪಾವತಿಸಲಾಗುವುದಿಲ್ಲ ಜೊತೆಗೆ ಬಡ್ತಿಯ ಮೇಲೂ ಇದು ಗಂಭೀರ ಪರಿಣಾಮ ಬೀರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಂದಹಾಗೆ ವರದಿಗಳ ಪ್ರಕಾರ ಹೊಸ ಗಡುವಿನ ಮೊದಲು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸುವವರಿಗೆ ಮಾತ್ರ ಈ ತಿಂಗಳ ವೇತನವನ್ನು ಪಾವತಿಸಲಾಗುತ್ತದೆ. ಈ ನಿಯಮವು ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಅನ್ವಯಿಸುತ್ತದೆ. ಅಲ್ಲದೆ ಈ ಕ್ರಮವು ಸರ್ಕಾರದೊಳಗೆ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

Leave A Reply

Your email address will not be published.