BJP: ಜಮ್ಮು ಕಾಶ್ಮೀರ ವಿಧಾನಸಭಾ ಚುನಾನವಣೆ – ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿ ಕೆಲವೇ ಕ್ಷಣಗಳಲ್ಲಿ ಹಿಂಪಡೆದ ಬಿಜೆಪಿ !!
BJP: ಜಮ್ಮು ಮತ್ತು ಕಾಶ್ಮೀರಕ್ಕೆ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು,ಪಕ್ಷಗಳು ಅಭ್ಯರ್ಥಿಗಳ ಘೋಷಣೆಗೆ ಅಣಿಯಾಗಿವೆ. ಆದರೆ ಈ ನಡುವೆ ಬಿಜೆಪಿ ಒಂದು ಎಡವಟ್ಟು ಮಾಡಿಕೊಂಡಿದ್ದು, ಜಮ್ಮು ಕಾಶ್ಮೀರ (Jammu Kashmir) ಚುನಾವಣೆಗೆ ಸಂಬಂಧಿಸಿದಂತೆ ಇಂದು(ಆ 26) ಬೆಳಗ್ಗೆ ಪ್ರಕಟಿಸಿದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಿಂದಕ್ಕೆ ಪಡೆದಿದೆ.
ಹೌದು, 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಗಳು ನಡೆಯುತ್ತಿವೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದು ಬೆಳಗ್ಗೆ ಬಿಜೆಪಿ (BJP) 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು(Candidate List) ಘೋಷಿಸಿತ್ತು. ಇದೀಗ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಿಂಪಡೆದಿದ್ದು, ಪರಿಷ್ಕೃತ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.
ಪಟ್ಟಿಯನ್ನು ಮರುಪರಿಶೀಲಿಸಲಾಗುತ್ತಿದೆ ಮತ್ತು ಪಕ್ಷವು ಶೀಘ್ರದಲ್ಲೇ ‘ಪುನರ್ ರಚಿಸಿದ’ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈಗ ಹಿಂಪಡೆಯಲಾದ ಪಟ್ಟಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ, ಮಾಜಿ ಉಪಮುಖ್ಯಮಂತ್ರಿಗಳಾದ ಕವಿಂದರ್ ಗುಪ್ತಾ ಮತ್ತು ನಿರ್ಮಲ್ ಸಿಂಗ್ ಅವರ ಹೆಸರು ಇರಲಿಲ್ಲ.