Jay Shah: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಅಮಿತ್ ಶಾ ಪುತ್ರ, ಜಯ್ ಶಾ ಅವಿರೋಧ ಆಯ್ಕೆ- ಭಾರತಕ್ಕೆ ಮತ್ತೊಂದು ಹಿರಿಮೆ !!
Jay Shah: ಬಿಸಿಸಿಐ (BCCI) ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸುಪುತ್ರ ಜಯ್ ಶಾ (Jay Shah) ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಮುಂದಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೌದು, 2019 ರಿಂದ 2024 ರವರೆಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಯ್ ಶಾ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಖ್ಯಸ್ಥರಾಗಿ ಜೈ ಶಾ ಆಯ್ಕೆಯಾಗಿದ್ದಾರೆ. ಈ ಮೂಲಕ ಅತೀ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಹುದ್ದೆ ಏರಿದರು ಎಂಬ ಹೆಗ್ಗಳಿಕೆಯೊಂದಿಗೆ ಐಸಿಸಿ ಚುಕ್ಕಾಣಿ ಹಿಡಿಯುವ ಮೂಲಕ ವಿಶ್ವ ಕ್ರಿಕೆಟ್ನಲ್ಲೂ ತನ್ನ ಪ್ರಭಾವ ಬೀರಲು ಮುಂದಾಗಿದ್ದಾರೆ.
ಅಂದಹಾಗೆ ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದೆ. ಹೀಗಾಗಿ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಇನ್ನು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಜಯ್ ಶಾ ಸಂತಸ ಹಂಚಿಕೊಂಡಿದ್ದಾರೆ. ಬಿಸಿಸಿಐ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿದ ನನಗೆ ಇದೀಗ ಅತ್ಯುನ್ನತ ಜವಾಬ್ದಾರಿ ಹೆಗಲೇರಿದೆ. ಕ್ರಿಕೆಟ್‌ನನ್ನು ಮತ್ತಷ್ಟು ಜಾಗತಿಕ ಕ್ರೀಡೆಯನ್ನಾಗಿ ಮಾಡಲು ಶ್ರಮಿಸುತ್ತೇನೆ. ಎಲ್ಲಾ ಮಾದರಿ ಕ್ರಿಕೆಟ್‌ನಲ್ಲಿ ಸಮತೋಲನ ಕಾಪಾಡಿಕೊಳ್ಳುವುದು, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ಕ್ರಿಕೆಟ್ ಮಾದರಿ ಕ್ರೀಡೆಯನ್ನಾಗಿ ಮಾಡುವುದು ಗುರಿಯಾಗಿದೆ. ಕ್ರಿಕೆಟ್ ಜನಪ್ರಿಯತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದೇ ಮೊದಲ ಗುರಿ ಎಂದು ಜಯ್ ಶಾ ಹೇಳಿದ್ದಾರೆ.