Valmiki Scam ride: ವಾಲ್ಮಿಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣ ಹಿನ್ನೆಲೆ: ಬಳ್ಳಾರಿಯಲ್ಲಿ ಇಡಿ ಅಧಿಕಾರಿಗಳ ದಾಳಿ

Share the Article

Valmiki Scam ride: ಮುಡ ಹಗರಣದ(MUDA Scam) ಗಲಾಟೆ ಮಧ್ಯೆ ಕೊಂಚ ತಣ್ಣಗಾಗಿದ್ದ ಕರ್ನಾಟಕದ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ(Valmiki Scam) ಇಂದು ಮತ್ತೆ ಸುದ್ದಿಯಲ್ಲಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಹುಕೋಟಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ(ED) ಚಾರ್ಜ್ಶೀಟ್(Charge Sheet) ಸಲ್ಲಿಕೆ ಮಾಡಲಿದೆ. ಇದೇ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ(Ex MLA Nagendra) ಆಪ್ತರ ಮನೆಗಳ ಮೇಲೆ ಬಳ್ಳಾರಿಯಲ್ಲಿ ದಾಳಿ ನಡೆಸಿದ್ದಾರೆ.

ಬಳ್ಳಾರಿಯ ವಿವಿಧೆಡೆ ಮತ್ತೊಮ್ಮೆ ಇಡಿ ಅಧಿಕಾರಿಗಳ ದಾಳಿ ಮಾಡಿದ್ದು, ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಾಜಿ ಸಚಿವ ನಾಗೇಂದ್ರ ಹತ್ತಿರದ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆದಿದೆ. ಒಟ್ಟು ನಾಲ್ಕು ಆಪ್ತರ ಮನೆಯ ಮೇಲೆ ಇಡಿ ದಾಳಿಯಾಗಿದೆ.

Leave A Reply