Waqf Amendment Act: ಕೇಂದ್ರದ ವಖ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಖ್ಫ್ ಬೋರ್ಡ್ ವಿರೋಧ
Waqf Amendment Act: ಇತ್ತೀಚೆಗೆ ಭಾರಿ ವಿರೋಧದ ನಡುವೆಯೇ ಕೇಂದ್ರ ಸರ್ಕಾರ(Central Govt) ವಖ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದೆ. ಆದರೆ ಇದಕ್ಕೆ ರಾಜ್ಯ ವಖ್ಫ್ ಬೋರ್ಡ್(State Waqf board) ಭಾರಿ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಇದಕ್ಕೆ ಒಪ್ಪುವುದಿಲ್ಲ ಎಂದು ಸಚಿವ ಜಮೀರ್ ಅಹಮದ್(MLA Jamir Ahmad) ಜೊತೆ ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ(Meeting) ನಿರ್ಣಯ(Resolution) ಕೈಗೊಳ್ಳಲಾಯ್ತು.
ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ಗೆ ವಿರೋಧ ಪಡಿಸಿ ನಿರ್ಣಯ ತೆಗೆದುಕೊಂಡಿದ್ದು, ನಿರ್ಣಯದ ಪ್ರತಿಯನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನಿಯೋಗ ನೀಡಿದೆ. ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಸದಸ್ಯರಾದ ಮೌಲನಾ ಶಾಫಿ ಸಾದಿ, ಜಿ . ಯಾಕೂಬ್, ಅಡ್ವೋಕೆಟ್ ರಿಯಾಜ್, ಅಡ್ವೋಕೆಟ್ ಅಸೀಫ್ ಅಲಿ, ಮೌಲಾನಾ ಅಜರ್ ಅಭಿದಿ ಇರುವಗಳನ್ನು ಒಳಗೊಂಡ ನಿಯೋಗ ಸಿಎಂ ಅವರನ್ನು ಭೇಟಿಯಾಗಿ ಪ್ರತಿಯನ್ನು ಸಲ್ಲಿಸಿತು.
ಕೇಂದ್ರಕ್ಕೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಪತ್ರ ಬರೆಯಲು ಮನವಿ ಮಾಡಿರುವ ನಿಯೋಗ, ಕೇಂದ್ರ ಸರ್ಕಾರ ರಚನೆ ಮಾಡಿರುವ ಜಂಟಿ ಸಲಹಾ ಸಮಿತಿಗೂ ಯಾವುದೇ ರೀತಿಯ ಮಾಹಿತಿ ಕೊಡುವುದಿಲ್ಲ. ನಮ್ಮದು ಸ್ವಾಯತ್ತ ಸಂಸ್ಥೆಯಾಗಿದ್ದು, ಉದ್ದೇಶಿತ ತಿದ್ದುಪಡಿ ಕಾಯ್ದೆ ಸಮುದಾಯದ ಹಿತಾ ಸಕ್ತಿಗೆ ವಿರುದ್ದವಾಗಿದೆ. ಹಾಗೂ ಮುಂದಿನ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ನಿಯೋಗ ಕೋರಿದೆ.