M B Patil apology: ಎಂ.ಬಿ ಪಾಟೀಲ್‌ಗೆ ಕ್ಷಮೆ ಕೋರಲು ಬಿಜೆಪಿ ಆಗ್ರಹ : ಪರಿಶಿಷ್ಟ ಸಮುದಾಯಗಳಿಗೆ ಅವಮಾನ!

M B Patil apology: ಮುಡಾ ಹಗರಣ(MUDA Scam) ಕಾನೂನಾತ್ಮಕವಾಗಿ ಒಂದೆಡೆ ಬೆಳವಣಿಗೆಗಳು ನಡೆಯುತ್ತಿದ್ದರೆ, ಇತ್ತ ರಾಜಕೀಯ ನಾಯಕರ ಕೆಸರೆರಚಾಟ ತಾರಕ್ಕಕ್ಕೇರಿದೆ. ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಾಣ ಸ್ವಾಮಿ(Chalavadi Narayana Swami) ಅವರ ವಿರುದ್ಧ ಇದೀಗ ಸಚಿವ ಎಂ ಬಿ ಪಾಟೀಲ್‌(MLA M B Patil) ನಾಲಿಗೆ ಹರಿಬಿಟ್ಟಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vejayendra) ಕಾಂಗ್ರೆಸ್‌ ಹಾಗೂ ಸಚಿವ ಎಂ ಬಿ ಪಾಟೀಲ್‌, ದಲಿತ ಸಮುದಾಯಗಳ ಹಾಗೂ ಛಲವಾದಿ ನಾರಾಯಣ ಸ್ವಾಮಿಯವರ ಕ್ಷಮೆ ಕೇಳಬೇಕೆಂದು ತಮ್ಮ ಎಕ್ಸ್‌ ಖಾತೆಯಲ್ಲಿ ಆಗ್ರಹಿಸಿದ್ದಾರೆ.

ಮಾನ್ಯ @NswamyChalavadi ಅವರು ಪರಿಶಿಷ್ಟ ಸಮುದಾಯದವರು ಎಂಬುವ ಕಾರಣಕ್ಕೆ ಅವರು ಗೌರವಾನ್ವಿತ ವಿರೋಧ ಪಕ್ಷದ ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ, ಅವರ ಸ್ಥಾನದ ಘನತೆಯನ್ನೂ ಲೆಕ್ಕಿಸದೇ, ಅವಹೇಳನಕಾರಿ ಹಾಗೂ ಕಚೋದ್ಯದ ಪದ ಉಪಯೋಗಿಸುವ ಮೂಲಕ ಬೃಹತ್ ಕೈಗಾರಿಕಾ ಸಚಿವ @MBPatil ಅವರು ಪದ ಸಂಸ್ಕೃತಿ ಇಲ್ಲದ ವ್ಯಕ್ತಿತ್ವವನ್ನು ಅನಾವರಣ ಮಾಡಿಕೊಂಡಿದ್ದಾರೆ, ಆ ಮೂಲಕ ಪರಿಶಿಷ್ಟ ಸಮುದಾಯದವರೊಬ್ಬರು ಉನ್ನತ ಸ್ಥಾನ ಅಲಂಕರಿಸಿರುವುದನ್ನು ಸಹಿಸಲಾಗದ ಅಸೂಯೆ ಹೊರಹಾಕಿದ್ದಾರೆ.

ಪರಿಶಿಷ್ಟ ಸಮುದಾಯದ ಹೋರಾಟಗಾರನೊಬ್ಬನನ್ನು ಗುರುತಿಸಿ ಭಾರತೀಯ ಜನತಾ ಪಾರ್ಟಿ ವಿರೋಧ ಪಕ್ಷ ಸ್ಥಾನದಲ್ಲಿ ಕುಳ್ಳಿರಿಸಿದೆ. ತಮ್ಮ ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಕೆಐಎಡಿಬಿಯಲ್ಲಿ ನಡೆದಿರುವ ಸಿಎ ನಿವೇಶನಗಳ ನಿಯಮಬಾಹಿರ ಹಾಗೂ ಅಕ್ರಮ ಮಂಜೂರಾತಿ ಕುರಿತು ಛಲವಾದಿಯವರು ಆರೋಪ ಮಾಡಿದ್ದಾರೆ, ಇದನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಿ ಮಾರುತ್ತರಿಸಬೇಕಾದ ಎಂ.ಬಿ ಪಾಟೀಲರು ಪ್ರತಿಕ್ರಿಯಿಸಿರುವ ಪರಿಯನ್ನು ನೋಡಿದರೆ ಅವರು ತಮ್ಮ ರಾಷ್ಟ್ರೀಯ ಅಧ್ಯಕ್ಷರನ್ನು ಓಲೈಸುವ ಭರದಲ್ಲಿ ತಳಮಟ್ಟದಿಂದ ಮೇಲೆದ್ದು ಬಂದು ಗೌರವಾನ್ವಿತ ಸ್ಥಾನ ಅಲಂಕರಿಸಿರುವ ಪರಿಶಿಷ್ಟ ಸಮುದಾಯದ ವ್ಯಕ್ತಿಯನ್ನು ಅಪಮಾನಿಸುವ ಮೂಲಕ ಪರಿಶಿಷ್ಟರ ಬಗ್ಗೆ ತಮಗಿರುವ ಗೌರವ ಯಾವ ಮಟ್ಟದ್ದು ಎನ್ನುವುದನ್ನು ಪ್ರದರ್ಶಿಸಿಕೊಂಡಿದ್ದಾರೆ.

ರಾಜಕೀಯದಲ್ಲಿ ಟೀಕೆ ಟಿಪ್ಪಣಿಗಳಿರಬೇಕು ಅದರಲ್ಲೂ ಆಡಳಿತ ಪಕ್ಷದಲ್ಲಿರುವವರು ವಿರೋಧ ಪಕ್ಷದ ಟೀಕೆಗಳನ್ನು ಸಕಾರಾತ್ಮಕ ಮನಸ್ಸಿನಿಂದ ಸ್ವೀಕರಿಸುವ ಔದಾರ್ಯ ತೋರಬೇಕು. ಆದರೆ ಹತಾಶೆ ಗೊಳಗಾದವರಂತೆ ವರ್ತಿಸುವುದು ಪ್ರಜಾತಂತ್ರ ವ್ಯವಸ್ಥೆಯನ್ನು ಅಪಮಾನಿಸಿದಂತೆ. ಈ ನಿಟ್ಟಿನಲ್ಲಿ ಎಂಬಿ ಪಾಟೀಲರು ಪ್ರಜಾತಂತ್ರ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ, ಶೋಷಿತ ಸಮುದಾಯದಿಂದ ಮೇಲೆದ್ದು ಬಂದ ವ್ಯಕ್ತಿತ್ವವನ್ನು ಅವಹೇಳನ ಮಾಡಿರುವುದು ಇಡೀ ಪರಿಶಿಷ್ಟ ಸಮುದಾಯವನ್ನು ಅಪಮಾನಿಸಿದಂತಾಗಿದೆ.

ಎಂ.ಬಿ ಪಾಟೀಲರ ಈ ವರ್ತನೆಯನ್ನು ಖಂಡಿಸಿ ಈ ಕೂಡಲೇ ಅವರು ಛಲವಾದಿ ನಾರಾಯಣ ಸ್ವಾಮಿಯವರು ಹಾಗೂ ಪರಿಶಿಷ್ಟ ಸಮುದಾಯಗಳಲ್ಲಿ ಬೇಷರತ್ ಕ್ಷಮೆ ಯಾಚಿಸಬೇಕೆಂದು ಆಗ್ರಹಪಡಿಸುತ್ತೇನೆ.

6 Comments
  1. MichaelLiemo says

    ventolin tabs 4mg: buy albuterol inhaler – can i buy ventolin over the counter australia
    ventolin.com

  2. Josephquees says

    lasix 100 mg: lasix furosemide 40 mg – lasix 100 mg tablet

  3. Josephquees says

    buy lasix online: cheap lasix – buy furosemide online

  4. Josephquees says

    ventolin online no prescription: Buy Albuterol for nebulizer online – ventolin prescription canada

  5. Timothydub says

    indian pharmacy paypal: Indian pharmacy international shipping – online shopping pharmacy india

  6. Timothydub says

    canadian pharmacy in canada: Cheapest online pharmacy – legit canadian pharmacy

Leave A Reply

Your email address will not be published.